Sunday, August 2, 2026

BDA Apartments

Home Front Page ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಟಕ್ಕರ್ ಕೊಟ್ಟ ಜಗದೀಶ್ ಶೆಟ್ಟರ್

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಟಕ್ಕರ್ ಕೊಟ್ಟ ಜಗದೀಶ್ ಶೆಟ್ಟರ್

ಬೆಂಗಳೂರು, ಏಪ್ರಿಲ್ 30, 2023 (www.justkannada.in): ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ನಡುವೆ ವಾಗ್ವಾದ ಜೋರಾಗಿದೆ.

ಶೆಟ್ಟರ್ ಸೋಲಿಸೋದಾಗಿ ರಕ್ತದಲ್ಲಿ ಬರೆದುಕೊಡ್ತೇನೆ ಎಂದು ಬಿಎಸ್ ಯಡಿಯೂರಪ್ಪ ಶಪಥ ಮಾಡಿದ್ದರು. ಅದರ ಬೆನ್ನ ಹಿಂದೆಯೇ ಶೆಟ್ಟರ್ ಶಕ್ತಿಪ್ರದರ್ಶನ ಮಾಡಿದ್ದಾರೆ.

ತಮಗೆ ಬಿಜೆಪಿಯಲ್ಲಿ ಅಪಮಾನ ಆಗಿದೆ. ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ ಎಂದು ಶೆಟ್ಟರ್ ಅಲವತ್ತುಕೊಂಡಿದ್ದಾರೆ. ಸಮಾಜದ ಪ್ರೀತಿ, ವಿಶ್ವಾಸದ ಬೆಂಬಲಕ್ಕೆ ಕೃತಜ್ಞನಾಗಿದ್ದೇನೆ ಎಂದು ಶೆಟ್ಟರ್ ಹೇಳಿದ್ದಾರೆ.

ಲಿಂಗಾಯತ ಸಮುದಾಯದ ಒಳಪಂಗಡಗಳ ಪ್ರಮುಖರು ಕೈ ಎತ್ತಿ ಸಂಪೂರ್ಣವಾಗಿ ಬೆಂಬಲ ವ್ಯಕ್ತವಾಗಿದೆ ಎನ್ನಲಾಗಿದೆ.