Thursday, August 20, 2026

BDA Apartments

Home Front Page ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಶೇ 83.89 ರಷ್ಟು ವಿದ್ಯಾರ್ಥಿಗಳು ಪಾಸ್.

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಶೇ 83.89 ರಷ್ಟು ವಿದ್ಯಾರ್ಥಿಗಳು ಪಾಸ್.

ಬೆಂಗಳೂರು,ಮೇ,8,2023(www.justkannada.in): ರಾಜ್ಯದಲ್ಲಿ ನಡೆದಿದ್ದ ಎಸ್.ಎಸ್ ಎಲ್ ಸಿ  ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ಶೇ 83.89 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಕರ್ನಾಟಕ ಶಾಲಾ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದೆ. ಶೇ 83.89ರಷ್ಟು ಫಲಿತಾಂಶ ಬಂದಿದ್ದು ಈ ಬಾರಿಯೂ ವಿದ್ಯಾರ್ಥಿನೀಯರೇ ಮೇಲುಗೈ ಸಾಧಿಸಿದ್ದಾರೆ.

ಪರೀಕ್ಷೆಯಲ್ಲಿ 7,00,619 ಮಂದಿ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದಲ್ಲಿ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನ, ಮಂಡ್ಯ ಜಿಲ್ಲೆ 2ನೇ ಸ್ಥಾನ ಪಡೆದಿದೆ.  ನಾಲ್ವರು ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ ಲಭಿಸಿದೆ.

Key words: SSLC –result- declared- 83.89 percent –students- passed.