Sunday, October 25, 2026

Dasara Wishes

CM DK Shivakumar DasraWishes_JK DasraWishes JK
Happy Dasara
Home Front Page ಮತದಾನ ಕೇಂದ್ರದ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ.

ಮತದಾನ ಕೇಂದ್ರದ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ.

ಬಳ್ಳಾರಿ,ಮೇ,10,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆಗಳಾದ ವರದಿಯಾಗಿದೆ. ಈ ನಡುವೆ ಮತದಾನ ಕೇಂದ್ರದ ಆವರಣದಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿರುವಂತಹ ಅಪರೂಪದ ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಮತದಾನ ಕೇಂದ್ರದಲ್ಲಿಯೇ ಗರ್ಭಿಣಿ ಮಣಿಲಾರಿಗೆ ಹೆರಿಗೆ ನೋವು ಪ್ರಾರಂಭವಾಗಿದ್ದು, ಕೂಡಲೇ ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲೇ  ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾನ ಕೇಂದ್ರದ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ delivery

Key words: assembly election-woman- gave- birth – child