Saturday, August 15, 2026

BDA Apartments

Home Front Page ಮತದಾನ ಮುಗಿದ ಬೆನ್ನಲ್ಲೆ ರಿಲ್ಯಾಕ್ಸ್ ಮೂಡ್ ಗೆ ಜಾರಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಮತದಾನ ಮುಗಿದ ಬೆನ್ನಲ್ಲೆ ರಿಲ್ಯಾಕ್ಸ್ ಮೂಡ್ ಗೆ ಜಾರಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಮೇ,11,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆಗೆ ನಿನ್ನೆ ಶಾಂತಿಯುತವಾಗಿ ಯಶಸ್ವಿಯಾಗಿ ಮತದಾನ ನಡೆದಿದ್ದು ಮತದಾನ ಮುಗಿದ ಬೆನ್ನಲ್ಲೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದಾರೆ.

ಹೌದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿದೇಶ ಪ್ರವಾಸಕ್ಕೆ ಹಾರಿದ್ದಾರೆ.  ನಿನ್ನೆ ರಾತ್ರಿ ಆಪ್ತರ ಜೊತೆ ಬೆಂಗಳೂರಿನಿಂದ ಸಿಂಗಾಪೂರ್ ಹೆಚ್ ಡಿಕೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.

ಈವರೆಗೆ ರಾಜ್ಯ ಚುನಾವಣಾ ಪ್ರಚಾರದಲ್ಲಿ  ಬ್ಯುಸಿಯಾಗಿದ್ದ ಹೆಚ್​ಡಿ ಕುಮಾರಸ್ವಾಮಿ, ಸದ್ಯ ರಿಲ್ಯಾಕ್ಸ್ ಮೂಡ್​ಗೆ ಜಾರಿದ್ದಾರೆ. ತಮ್ಮ ಆಪ್ತರೊಂದಿಗೆ ಸಿಂಗಾಪೂರ್​ಗೆ ತೆರಳಿದ್ದಾರೆ. ಇನ್ನು ಮೇ 13ರಂದು ಮಧ್ಯಾಹ್ನ ಮತ್ತೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನಲಾಗಿದೆ.

Key words: Former CM- HD Kumaraswamy – relaxed -mood -after – polling.