Friday, August 14, 2026

BDA Apartments

Home Front Page ದ್ವೇಷದಿಂದಲ್ಲ, ಹೃದಯದಿಂದ ಹೋರಾಡಿದ್ದೇವೆ: ‘ಕೈ’ ಹಿಡಿದ ಕರ್ನಾಟಕದ ಜನತೆಗೆ ಧನ್ಯವಾದ ಹೇಳಿದ ರಾಹುಲ್ ಗಾಂಧಿ.

ದ್ವೇಷದಿಂದಲ್ಲ, ಹೃದಯದಿಂದ ಹೋರಾಡಿದ್ದೇವೆ: ‘ಕೈ’ ಹಿಡಿದ ಕರ್ನಾಟಕದ ಜನತೆಗೆ ಧನ್ಯವಾದ ಹೇಳಿದ ರಾಹುಲ್ ಗಾಂಧಿ.

ನವದೆಹಲಿ,ಮೇ,2023(www.justkannda.in): ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದು ಕಾಂಗ್ರೆಸ್ ಗೆ ರಾಜ್ಯದ ಜನತೆ ಬಹುಮತ ನೀಡಿದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕದ ಜನತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ ಧನ್ಯವಾದ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿಯಾಗಿ ಮುನ್ನಡೆ ಸಾಧಿಸಿ, ಗೆಲುವಿನ ನಗೆ ಬೀರುತ್ತಿದ್ದಂತೆ ಮಾಧ್ಯಮದವರ ಜೊತೆ ಮಾತನಾಡಿದ ರಾಹುಲ್ ಗಾಂಧಿ,  ನಾನು ಮೊದಲಿಗೆ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನಾವು ಕರ್ನಾಟಕದಲ್ಲಿ ದ್ವೇಷದಿಂದ ಹೋರಾಡಿಲ್ಲ, ಹೃದಯದಿಂದ ಹೋರಾಡಿದ್ದೇವೆ. ದ್ವೇಷದ ಮುಂದೆ ಪ್ರೀತಿ ಗೆಲ್ಲುತ್ತದೆ, ಗೆದ್ದಿದೆ. ಈ ದೇಶದವರಿಗೆ ಗೊತ್ತು ಪ್ರೀತಿ ಇಷ್ಟ ಎಂದು ಹೇಳಿದ್ದಾರೆ.

ಜಾತಿಯಿಂದಲೇ ನಾವು ದ್ವೇಷವನ್ನು ಕಿತ್ತು ಹಾಕಿದ್ದೇವೆ. ಇದು ಇತರ ಎಲ್ಲ ರಾಜ್ಯಗಳಲ್ಲಿಯೂ ಸಂಭವಿಸುತ್ತದೆ . ನಾವು 5 ಗ್ಯಾರಂಟಿ ಭರವಸೆಗಳನ್ನು ನೀಡಿದ್ದೆವು. ನಾವು ಆ ಭರವಸೆಗಳನ್ನು ವಿಧಾನಸಭೆ ಕಲಾಪದ ಮೊದಲ ದಿನವೇ ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Key words: assembly election-congress-won-Rahul gandhi