Saturday, September 12, 2026

BDA Apartments

ಸಿದ್ದರಾಮಯ್ಯಗೆ ಸಿಎಂ ಹುದ್ದೆ ಸಾಧ್ಯತೆ: ನಿವಾಸದ ಮುಂದೆ ಹೆಚ್ಚಿನ ಪೊಲೀಸ್ ಭದ...
Home Front Page  ಸಿದ್ದರಾಮಯ್ಯಗೆ ಸಿಎಂ ಹುದ್ದೆ ಸಾಧ್ಯತೆ:  ನಿವಾಸದ ಮುಂದೆ ಹೆಚ್ಚಿನ ಪೊಲೀಸ್ ಭದ್ರತೆ.

 ಸಿದ್ದರಾಮಯ್ಯಗೆ ಸಿಎಂ ಹುದ್ದೆ ಸಾಧ್ಯತೆ:  ನಿವಾಸದ ಮುಂದೆ ಹೆಚ್ಚಿನ ಪೊಲೀಸ್ ಭದ್ರತೆ.

ಬೆಂಗಳೂರು,ಮೇ,17,2023(www.justkannada.in): ಸಿಎಂ ಸ್ಥಾನಕ್ಕೆ ಪೈಪೋಟಿ ಮುಂದುವರೆದಿದ್ದು, ಸಿದ್ಧರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಡಿ.ಕೆ ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಎರಡು ಪ್ರಮುಖ ಖಾತೆಗಳನ್ನ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ.

ಸಿದ್ದರಾಮಯ್ಯರಿಗೆ ಸಿಎಂ ಸ್ಥಾನ, ಡಿಕೆ ಶಿವಕುಮಾರ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರಿಯಲಿದ್ದಾರೆ. ಅಧ್ಯಕ್ಷ ಹುದ್ದೆ ಜೊತೆ ಎರಡು ಪ್ರಮುಖ ಖಾತೆಗಳಿಗೆ ಡಿಕೆಶಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ಇಂಧನ ಮತ್ತು ನೀರಾವರಿ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.ಸಿದ್ದರಾಮಯ್ಯಗೆ ಸಿಎಂ ಹುದ್ದೆ ಸಾಧ್ಯತೆ siddaramaiah

ಸಿದ್ದರಾಮಯ್ಯಗೆ ಸಿಎಂ ಸ್ಥಾನ ದೊರೆತರೆ ಅಭಿಮಾನಿಗಳು ನಿವಾಸದ ಬಳಿ ಬರುವ ಸಾಧ್ಯತೆ  ಹಿನ್ನಲೆ ಭದ್ರತೆ ಹೆಚ್ಚಿಸಲಾಗಿದೆ. ಒಂದು ಕೆಎಸ್ಆರ್​ಪಿ ವ್ಯಾನ್, 70 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕುಮಾರಕೃಪಾ ಬಳಿ ಇರುವ ಸಿದ್ದು ಸರ್ಕಾರಿ ನಿವಾಸದಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: police security – former CM –Siddaramaiah- residence.