Tuesday, August 11, 2026

BDA Apartments

Home Front Page ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ…

ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ…

ಮೈಸೂರು,ಮೇ,11,2019(www.justkannada.in): ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಅಭಿನಂದನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮೈಸೂರು ವಿವಿ ಗಣಕಯಂತ್ರ ಅಧ್ಯಯನ ವಿಭಾಗದಿಂದ ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಣಕಯಂತ್ರ ಅಧ್ಯಯನ ವಿಭಾಗದ ವತಿಯಿಂದ ಪ್ರೊ.ಜಿ.ಹೇಮಂತ್ ಕುಮಾರ್ ಅವರಿಗೆ ಹೂವಿನ ಹಾರ ಹಾಕಿ ಪೇಟ ತೊಡಿಸಿ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ, ತಮಿಳುನಾಡಿನ ಎಸ್.ಆರ್.ಎಂ  ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಮಿರೇಟ್ ನ ಪ್ರೊ.ಡಾ.ಆರ್.ಶ್ರೀನಿವಾಸನ್ ಸೇರಿ ಹಲವರು ಭಾಗಿಯಾಗಿದ್ದರು.

Key words: Mysore university-Vice Chancellor- Prof.G.Hemanth Kumar- congratulates – program.