Sunday, October 4, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಸಿಎಂ ಸಿದ‍್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶುಭಕೋರಿದ ಮಾಜಿ ಸಿಎಂಗಳಾದ ಬೊಮ್ಮಾಯಿ, ಹೆಚ್.ಡಿಕೆ..

ಸಿಎಂ ಸಿದ‍್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶುಭಕೋರಿದ ಮಾಜಿ ಸಿಎಂಗಳಾದ ಬೊಮ್ಮಾಯಿ, ಹೆಚ್.ಡಿಕೆ..

ಬೆಂಗಳೂರು,ಮೇ,20,2023(www.justkannada.in): ರಾಜ್ಯದ ನೂತನ ಮುಖ್ಯಮಂತ್ರಿ  ವಹಿಸಿಕೊಂಡ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ  ನೂತನ 8 ಸಚಿವರಿಗೆ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಮತ್ತು ಹೆಚ್.ಡಿ ಕುಮಾರಸ್ವಾಮಿ ಶುಭಕೋರಿದ್ದಾರೆ.

ಟ್ವೀಟ್ ಮಾಡಿ ಶುಭಕೋರಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

ಇನ್ನು ನೂತನ ಸಿಎಂ, ಡಿಸಿಎಂಗೆ ಶುಭ ಕೋರಿರುವ ಹೆಚ್.ಡಿ ಕುಮಾರಸ್ವಾಮಿ,   ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು.  ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದಿದ್ದಾರೆ.

Key words: Former CM-Basavaraj Bommai- H.D kumaraswamy- wish-CM Siddharmaiah -DCM D.K Shivakumar.