Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಲು ಮುಗಿಬಿದ್ದ ಜನ !

ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಲು ಮುಗಿಬಿದ್ದ ಜನ !

ಬೆಂಗಳೂರು, ಮೇ 21, 2023 (www.justkannada.in): ರಾಜ್ಯಾದ್ಯಂತ ಜನ ಬಿಪಿಎಲ್ ಕಾರ್ಡ್‌ ಮಾಡಿಸಿಕೊಳ್ಳಲು ಮುಗಿಬೀಳತೊಡಗಿದ್ದಾರೆ.

ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ವೇಳೆ ಜನರಿಗೆ ನೀಡಿದ ಉಚಿತ ಕೊಡುಗೆಗಳ ಭರವಸೆಗಳನ್ನು ಈಡೇರಿಸುವುದು ನಿಚ್ಚಳವಾಗಿದೆ.

ಆದರೆ ಈ ಕೊಡುಗೆಗಳನ್ನು ಬಡವರಿಗೆ ಮಾತ್ರ ಸೀಮಿತಗೊಳಿಸುವ ಎಲ್ಲ ಸಾಧ್ಯತೆ ಇದೆ. ಹೀಗಾಗಿ ಜನ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ಆಹಾರ, ನಾಗರಿಕ ಪೂರೈಕೆ ಮತ್ತು ಸಾರ್ವಜನಿಕ ಸರಬರಾಜು ಇಲಾಖೆಯ ವೆಬ್‌ಸೈಟ್‌ಗೆ ಸ್ಥಗಿತಗೊಳಿಸಲಾಗಿದೆ.

ಹೆಚ್ಚು ಜನ ಒಂದೇ ಸಲಕ್ಕೆ ಪ್ರಯತ್ನ ಮಾಡುತ್ತಿರುವುದರಿಂದ ವೆಬ್‌ಸೈಟ್ ನಿಧಾನವಾಗಿದೆ. ಕೆಲವೆಡೆ ಓಪನ್ ಕೂಡ ಆಗುತ್ತಿಲ್ಲ. ಈ ಸಮಸ್ಯೆಯನ್ನು ಮನಗಂಡ ಆಹಾರ ಇಲಾಖೆಯವರು ಹೊಸ ಪಡಿತರ ಚೀಟಿ ನೀಡುವ ಪ್ರಕ್ರಿಯೆಯನ್ನೇ ತಾತ್ಕಾಲಿಕವಾಗಿ ನಿಲ್ಲಿಸಿದ್ದಾರೆ.