Wednesday, September 30, 2026

BDA Apartments

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ BDA JK_Adv BDA Adv
Home Cinema ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ.

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ.

ಹೈದರಾಬಾದ್,ಮೇ,22,2023(www.justkannada.in): ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ನಟ ಶರತ್ ಬಾಬು ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.  ಬಹುಅಂಗಾಂಗ ವೈಪಲ್ಯದಿಂದ ಅವರು ಬಳಲುತ್ತಿದ್ದರು. ಶರತ್ ಬಾಬು ಅವರನ್ನು ಹೈದರಾಬಾದ್​ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾಗಿದ್ದಾರೆ.ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ sharath babu

ಶರತ್ ಬಾಬು 1973 ರಲ್ಲಿ ಚಿತ್ರರಂಗ ಪ್ರವೇಶಿಸಿ ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಜನಪ್ರಿಯ ನಟರಾಗಿದ್ದವರು. ಸಿನಿಮಾ ನಾಯಕನಾಗಿ, ಎರಡನೇ ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಒಂದು ಸಮಯದಲ್ಲಿ ಸ್ಟಾರ್ ಆಗಿ ಸಹ ಮೆರೆದಿದ್ದಾರೆ.

Key words: hydarabad- Actor -Sarath Babu – no more.