Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಇಂದಿರಾ ಕ್ಯಾಂಟಿನ್ ಪುನಾರಂಭಕ್ಕೆ ಸೂಚನೆ ನೀಡಿದ ರಾಜ್ಯ ಸರ್ಕಾರ.

ಇಂದಿರಾ ಕ್ಯಾಂಟಿನ್ ಪುನಾರಂಭಕ್ಕೆ ಸೂಚನೆ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು,ಮೇ,24,2023(www.justkannada.in):  ಹಿಂದಿನ ಸರ್ಕಾರ ಬಂದ್ ಮಾಡಿದ್ಧ ಇಂದಿರಾ ಕ್ಯಾಂಟಿನ್ ಪುನಾರಂಭ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಸೂಚನೆ ನೀಡಿದೆ.

ಈ ಕುರಿತು ಮಾತನಾಡಿದ  ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ ಪುರ, ಇಂದಿರಾ ಕ್ಯಾಂಟೀನ್ ಪುನಾರಂಭಕ್ಕೆ ರಾಜ್ಯ ಸರ್ಕಾರ ಸೂಚಿಸಿದೆ , ಇರುವ ಕ್ಯಾಂಟೀನ್‌ ಗಳ ಪೈಕಿ 10 ಮೊಬೈಲ್ ಕ್ಯಾಂಟೀನ್ ಕ್ಲೋಸ್ ಆಗಿದೆ. 243 ಸ್ಥಳಗಳಲ್ಲಿ ಕ್ಯಾಂಟೀನ್ ಆರಂಭಿಸುತ್ತೇವೆ. ಈಗಾಗಲೇ ಇಂದಿರಾ ಕ್ಯಾಂಟೀನ್ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕ್ಯಾಂಟೀನ್​ ಅಡುಗೆ ಕೋಣೆ ವಸ್ತುಗಳನ್ನು ರೀಪ್ಲೇಸ್ ಮಾಡಬೇಕಿದೆ ಎಂದು ತಿಳಿಸಿದರು.ಇಂದಿರಾ ಕ್ಯಾಂಟಿನ್ ಪುನಾರಂಭಕ್ಕೆ ಸೂಚನೆ ನೀಡಿದ ರಾಜ್ಯ ಸರ್ಕಾರ indira canteen

ಇಂದಿರಾ ಕ್ಯಾಂಟಿನ್ ಉಪಾಹಾರ ಬೆಲೆ 5 ರಿಂದ 10 ರೂಪಾಯಿಗೆ ಏರಿಕೆ ಮಾಡಲಾಗುತ್ತದೆ. ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ, ಅದು ಹಾಗೆಯೇ ಮುಂದುವರಿದಿದೆ. ಜೊತೆಗೆ ಇನ್ನು ಹಣ ಪಾವತಿಯಾಗಿಲ್ಲ ಅನ್ನೋ ದೂರು ಕೇಳಿಬಂದಿದೆ. ನಾವು ಮಾರ್ಷಲ್ಸ್‌ ನೀಡುವ ಆಧಾರದ ಮೇಲೆ ಮೊತ್ತ ಪಾವತಿ ಮಾಡಿದ್ದೇವೆ. 1 ತಿಂಗಳಲ್ಲಿ‌ ಟೆಂಡರ್, ಗುತ್ತಿಗೆದಾರರಿಗೆ ಹಳೇ ಪೇಮೆಂಟ್ ಆಗಲಿದೆ ಜಯರಾಂ ರಾಯ್‌ಪುರ ಹೇಳಿದರು.

Key words: State Govt -given notice -reopen -Indira Canteen