Sunday, August 23, 2026

BDA Apartments

Home Front Page ಆರ್ ಎಸ್ ಎಸ್, ಬಜರಂಗದಳ ನಿಷೇಧದ ಬಗ್ಗೆ ಸಿಎಂ ನಿಲುವು ಸ್ಪಷ್ಪಪಡಿಸಲಿ – ಮಾಜಿ ಸಿಎಂ...

ಆರ್ ಎಸ್ ಎಸ್, ಬಜರಂಗದಳ ನಿಷೇಧದ ಬಗ್ಗೆ ಸಿಎಂ ನಿಲುವು ಸ್ಪಷ್ಪಪಡಿಸಲಿ – ಮಾಜಿ ಸಿಎಂ  ಬೊಮ್ಮಾಯಿ ಆಗ್ರಹ.

ಬೆಂಗಳೂರು,ಮೇ,26,2023(www.justkannada.in): ಆರ್ ಎಸ್ ಎಸ್ ನಿಷೇಧ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಉತ್ತರಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಈ ಕುರಿತು ಇಂದು ಮಾತನಾಡಿದ ಬಸವರಾಜ ಬೊಮ್ಮಾಯಿ, ಆರ್ ಎಸ್ ಎಸ್ ಬ್ಯಾನ್  ಮಾಡುವ ಅಧಿಕಾರ ಯಾರಿಗೂ ಇಲ್ಲ ಓಲೈಕೆ ರಾಜಕೀಯಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ.  ಯಾವುದೇ ಸಂಘ-ಸಂಸ್ಥೆಯನ್ನು ನಿಷೇಧ ಮಾಡುವ ಅಧಿಕಾರ ಇವರಿಗಿಲ್ಲ.  ಒಂದು ಸಮುದಾಯದ ತುಷ್ಟೀಕರಣಕ್ಕೆ ಇಂತಹ ಹೇಳಿಕೆ ಕೊಡುತ್ತಿದ್ದಾರೆ. ಆರ್ ಎಸ್ ಎಸ್ ಬಜರಂಗದಳ ನಿಷೇಧ ಬಗ್ಗೆ ಸಿಎಂ ನಿಲುವು ಸ್ಪಷ್ಪಪಡಿಸಲಿ. ಸಚಿವರ ಹೇಳಿಕೆಗೆ ಸಿಎಂ ಬೆಂಬಲ ಇದೆಯಾ ಅಂತ ಜನರಿಗೆ ತಿಳಿಸಲಿ. ಆರ್​ಎಸ್​ಎಸ್​​ ನಿಷೇಧ ಯಾರಿಂದಲೂ ಸಾಧ್ಯವಿಲ್ಲ ಎಂದು ಬೆಂಗಳೂರಿನಲ್ಲಿ ಹೇಳಿದರು.

ರಾಜ್ಯದಲ್ಲಿ ಒಂದೇ ಪಕ್ಷದ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ಇಬ್ಬರು ನಾಯಕರ ಮಧ್ಯೆ ಭಿನ್ನಾಭಿಪ್ರಾಯವಿದೆ. ಕಾಂಗ್ರೆಸ್ ಸರ್ಕಾರ ಅಭಿವೃದ್ದಿ ಮಾಡುತ್ತಿಲ್ಲ. ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ತನಿಖೆ ಮಾಡಿ ಕೇಸ್ ಹಾಕಲಿ ನಾವು ಎದುರಿಸುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.

Key words: CM- clarify – ban – RSS- Bajrang Dal – Bommai