Tuesday, September 22, 2026

BDA Apartments

ಹಂತ ಹಂತವಾಗಿ ಗ್ಯಾರಂಟಿ ಯೋಜನೆ ಜಾರಿ: 5 ಕೆಜಿ ಅಕ್ಕಿ ನೀಡುವಂತೆ ಕೇಂದ್ರಕ್ಕೆ ಮ...
Home Front Page ಹಂತ ಹಂತವಾಗಿ ಗ್ಯಾರಂಟಿ ಯೋಜನೆ ಜಾರಿ: 5 ಕೆಜಿ ಅಕ್ಕಿ ನೀಡುವಂತೆ ಕೇಂದ್ರಕ್ಕೆ ಮನವಿ-ಸಚಿವ ಕೆ.ಎಚ್...

ಹಂತ ಹಂತವಾಗಿ ಗ್ಯಾರಂಟಿ ಯೋಜನೆ ಜಾರಿ: 5 ಕೆಜಿ ಅಕ್ಕಿ ನೀಡುವಂತೆ ಕೇಂದ್ರಕ್ಕೆ ಮನವಿ-ಸಚಿವ ಕೆ.ಎಚ್ ಮುನಿಯಪ್ಪ.

ಬೆಂಗಳೂರು,ಜೂನ್,1,2023(www.justkannada.in): ಹಂತ ಹಂತವಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ.  5 ಕೆಜಿ ಅಕ್ಕಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಇಂದು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ನಾಳೆ ತೀರ್ಮಾನ ಮಾಡ್ತೇವೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. 10 ಕೆಜಿ ಅಕ್ಕಿ ಕೊಟ್ಟೇ ಕೊಡ್ತೇವೆ. ಅದರಲ್ಲಿ ಎರಡನೇ ಮಾತಿಲ್ಲ. 5 ಕಾರ್ಯಕ್ರಮಗಳನ್ನು ಹಂತ ಹಂತವಾಗಿ ಜಾರಿ ಮಾಡುತ್ತೇವೆ.ಹಂತ ಹಂತವಾಗಿ ಗ್ಯಾರಂಟಿ ಯೋಜನೆ ಜಾರಿ kh muniyappa kh

ಭಾರತದಲ್ಲಿ ಭತ್ತವನ್ನು ಸಾಕಷ್ಟು ಪ್ರಮಾಣದಲ್ಲಿ ಬೆಳೆಯುತ್ತಾರೆ. ಕೇಂದ್ರ ಸರ್ಕಾರಕ್ಕೆ 5 ಕೆಜಿ ಅಕ್ಕಿ ನೀಡುವಂತೆ ಮನವಿ ಮಾಡ್ತೇವೆ. ಒಂದು ವೇಳೆ ಕೇಂದ್ರ ಸರ್ಕಾರ ಕೊಡದಿದ್ದರೇ ಟೆಂಡರ್ ಕರೆಯುತ್ತೇವೆ. ನಾವೇ ಟೆಂಡರ್ ಮೂಲಕ ಅಕ್ಕಿ ಖರೀದಿಸಿ ವಿತರಣೆ ಮಾಡುತ್ತೇವೆ  ಎಂದು ಕೆ.ಎಚ್ ಮುನಿಯಪ್ಪ ತಿಳಿಸಿದರು.

Key words: implementation – guarantee –scheme- Minister -KH Muniappa.