Friday, July 31, 2026

BDA Apartments

Home Front Page ಒಡಿಶಾ ರೈಲು ದುರಂತ: ಗುಂಡ್ಲುಪೇಟೆ ತಾಲೂಕಿನ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರು

ಒಡಿಶಾ ರೈಲು ದುರಂತ: ಗುಂಡ್ಲುಪೇಟೆ ತಾಲೂಕಿನ ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರು

ಬೆಂಗಳೂರು, ಜೂನ್ 04, 2023 (www.justkannada.in): ಒಡಿಶಾ ರೈಲು ದುರಂತದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಇಬ್ಬರು ಯುವಕರು ಸಿಲುಕಿಕೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ಮಹೇಶ್ ಹಾಗೂ ಪವನ್ ಎಂಬ ಯುವಕರು ಅಪಘಾತಕ್ಕೀಡಾದ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಕರ್ನಾಟಕದ ಜನರನ್ನು ಕರೆತರಲು ಹೋಗಿರುವ ಸಚಿವ ಸಂತೋಷ್ ಲಾಡ್ ಅವರೊಟ್ಟಿಗೆ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ, ಯುವಕರಿಗೆ ನೆರವು ಕೊಡಿಸಿ, ಹಣವನ್ನು ನೆಟ್ ಬ್ಯಾಂಕಿಂಗ್ ಮೂಲಕ ರವಾನಿಸಿ ಪರ್ಯಾಯ ಮಾರ್ಗದಲ್ಲಿ ರಾಜ್ಯಕ್ಕೆ ಹಿಂತಿರುಗುವಂತೆ ಸಲಹೆ ಕೊಟ್ಟಿದ್ದಾರೆ.

ಈ ಇಬ್ಬರು ಯುವಕರು ಸೇನೆಯ ಪರೀಕ್ಷೆ ಬರೆಯಲು ತೆರಳಿದ್ದರು ಎಂದು ತಿಳಿದುಬಂದಿದೆ. ಯುಕವರು ಅಪಘಾತವಾದ ರೈಲಿನಲ್ಲೇ ಇದ್ದು, ಇವರಿಗೆ ಶಾಸಕ ಗಣೇಶ್ ಪ್ರಸಾದ್ ತುರ್ತಾಗಿ ಸ್ಪಂದಿಸಿ ನೆರವಾಗಿದ್ದಾರೆ.