Saturday, August 22, 2026

BDA Apartments

Home Front Page ಲೋಕಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಹೋರಾಟ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.

ಲೋಕಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಹೋರಾಟ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.

ಬೆಂಗಳೂರು,ಜೂನ್,6,2023(www.justkannada.in):  ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಎಂಬ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಈ ವಿಚಾರ ಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಲೋಕಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್​.ಡಿ.ದೇವೇಗೌಡ ಅವರು ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಲೋಕಸಭೆ ಚುನಾವಣೆ ಬಗ್ಗೆ ಈಗಲೇ ಚರ್ಚೆ ಮಾಡಲು ಹೋಗಲ್ಲ. ಲೋಕಸಭೆ ಚುನಾವಣೆಯಲ್ಲಿ ಎಷ್ಟು ಕಡೆ ಅಭ್ಯರ್ಥಿ ಹಾಕಬೇಕು. ಎಲ್ಲೆಲ್ಲಿ ಸ್ಪರ್ಧಿಸಬೇಕೆಂದು ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತೇವೆ. ಲೋಕಸಭೆ ಚುನಾವಣೆಗೂ ಮುನ್ನ ಸ್ಥಳೀಯ ಚುನಾವಣೆಗೆ ತಯಾರಿ ನಡೆಸುತ್ತೇವೆ ಎಂದರು.

ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ‌ ನಮಗೆ ಇದೆ. ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ. ಆ ಚುನಾವಣೆಗಳ ಬಗ್ಗೆ ನಾವು ತಯಾರಿ ಮಾಡಬೇಕು. ಪಕ್ಷ ಉಳಿಯಬೇಕಾದರೇ ಏನು ಮಾಡಬೇಕೆಂದು ಚರ್ಚೆ ಮಾಡುತ್ತೇವೆ. ಪಕ್ಷ ಸಂಘಟನೆ ಬಗ್ಗೆ ನಮ್ಮ ಮುಖಂಡರ ಜತೆ ಚರ್ಚೆ ಮಾಡುತ್ತೇವೆ. ನಮ್ಮ ಶಕ್ತಿ ನಮ್ಮ ಕಾರ್ಯಕರ್ತರು. ಯುವಕರಿಗೆ ಹೆಚ್ಚು ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಹೆಚ್​​.ಡಿ ದೇವೇಗೌಡರು  ಹೇಳಿದರು.

Key words: Fighting – LokSabha –election-own strength- Former PM- HD Deve Gowda.