Wednesday, August 12, 2026

BDA Apartments

Home Front Page ಬೆಂಗಳೂರು-ಮೈಸೂರು ಹೈವೇ ಟೋಲ್ ಬಳಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್.

ಬೆಂಗಳೂರು-ಮೈಸೂರು ಹೈವೇ ಟೋಲ್ ಬಳಿ ಶಾಸಕರ ಜೊತೆ ಟೋಲ್ ಸಿಬ್ಬಂದಿ ಕಿರಿಕ್.

ರಾಮನಗರ,ಜೂನ್,6,2023(www.justkannada.in): ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿನ ಟೋಲ್ ಬಳಿ ಮಳವಳ್ಳಿ ಕ್ಷೇತ್ರದ ಶಾಸಕ  ನರೇಂದ್ರಸ್ವಾಮಿ ಜೊತೆ ಟೋಲ್ ಸಿಬ್ಬಂದಿ ಕಿರಿಕ್ ಮಾಡಿದ ಘಟನೆ ನಡೆದಿದೆ.

ಶೇಷಗಿರಿಹಳ್ಳಿಯಲ್ಲಿರುವ ಬೆಂಗಳೂರು-ಮೈಸೂರು ಎಕ್ಸ್ ​ಪ್ರೆಸ್ ಹೈವೈ  ಟೋಲ್​ ಬಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ  ಜೊತೆ ಟೋಲ್ ಸಿಬ್ಬಂದಿ ಕಿರಿಕ್​ ಮಾಡಿದ್ದಾರೆ. ಜೂನ್ 4ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿಗೆ ತೆರಳುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರ ಕಾರನ್ನು ಟೋಲ್ ಸಿಬ್ಬಂದಿ ತಡೆದಿದ್ದಾರೆ. ವಾಹನದ ಪಾಸ್ ಇದ್ದರೂ ಸಿಬ್ಬಂದಿ ಕಾರು ಪರಿಶೀಲನೆ ನಡೆಸಿದ್ದು, ಈ ವೇಳೆ ಕಾರಿನಲ್ಲಿದ್ದ ಶಾಸಕರ ಜೊತೆ ವಾಗ್ವಾದ ನಡೆಸಿದ್ದಾರೆ. ಪೊಲೀಸರ ಬರಲಿ ಎಂದು ಮಳವಳ್ಳಿ ಶಾಸಕರು ಹೇಳಿದಾಗ, ಯಾವ ಪೊಲೀಸ್ ಬೇಕಾದರೂ ಬರಲಿ, ನಾನು ನೋಡಿರದ ಪೊಲೀಸರಾ ಅಂತ ಟೋಲ್ ಸಿಬ್ಬಂದಿ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.

ಅಷ್ಟಕ್ಕೂ ಸುಮ್ಮನಾಗದ ಟೋಲ್ ಸಿಬ್ಬಂದಿ, ನಿಮ್ಮನ್ನು ಎಕ್ಸ್​ಪ್ರೆಸ್ ಹೈವೇನಲ್ಲಿ ಬಿಟ್ಟಿಯಾಗಿ ಓಡಾಡಲು ಬಿಡುತ್ತಾ ಇದ್ದೇವೆ ಎಂದು ಶಾಸಕರಿಗೆ ಹೇಳಿದ್ದಾರೆ. ಸದ್ಯ ಮಾತಿನ ಚಕಮಕಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Key words: Toll – staff-MLA-Narendra swamy-near -Bangalore-Mysore- highway