Wednesday, August 12, 2026

BDA Apartments

Home Front Page ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ: ರಾಜ್ಯದ ಜನ ಕೊಟ್ಟ ತೀರ್ಪು ಒಪ್ಪಿದ್ದೇವೆ- ಮಾಜಿ ಸಿಎಂ...

ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ: ರಾಜ್ಯದ ಜನ ಕೊಟ್ಟ ತೀರ್ಪು ಒಪ್ಪಿದ್ದೇವೆ- ಮಾಜಿ ಸಿಎಂ ಬೊಮ್ಮಾಯಿ.

ಹುಬ್ಬಳ್ಳಿ,ಜೂನ್,13,2023(www.justkannada.in): ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ. ಅಧಿವೇಶನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ,  ಸೋಲಿನ ಬಗ್ಗೆ ವರಿಷ್ಠರು ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ರಾಜ್ಯದ ಜನ ಕೊಟ್ಟ ತೀರ್ಪನ್ನು ಒಪ್ಪಿಕೊಂಡಿದ್ದೇವೆ. ನಾನೇ ವಿಧಾನಸಭೆ ಚುನಾವಣೆ ಸೋಲಿನ ಹೊಣೆ ಹೊತ್ತಿದ್ದೇನೆ ಎಂದರು.bommai

ವಿದ್ಯುತ್ ದರ ಏರಿಕೆ ನಾವು ಮಾಡಿದ್ದಲ್ಲ ಬಿಜೆಪಿ ಸರ್ಕಾರ ಅವಧಿಯಲ್ಲಿ ಆಗಿದ್ದು ಎಂಬ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ,  ನಮ್ಮ ಸರ್ಕಾರ ವಿದ್ಯುತ್​ ದರ ಏರಿಕೆ ಮಾಡಿಲ್ಲ. ವಿದ್ಯುತ್​ ದರ ಹೆಚ್ಚಳದ ವರದಿಗೆ ನಾವು ಒಪ್ಪಿಗೆ ನೀಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಏರಿಕೆ ವರದಿಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ವಿದ್ಯುತ್​ ದರ ಹೆಚ್ಚಳವಾಗಿದೆ  ಎಂದರು.

Key words: not -aspirant – post – opposition leader-Former CM –Basavaraja Bommai.