Friday, August 21, 2026

BDA Apartments

Home Front Page ಡಿಸಿಎಂ ಡಿ.ಕೆ ಶಿವಕುಮಾರ್ ಗೆ ರಿಲೀಫ್: ಐದು ಪ್ರಕರಣಗಳನ್ನ ರದ್ದುಗೊಳಿಸಿದ ಹೈಕೋರ್ಟ್.

ಡಿಸಿಎಂ ಡಿ.ಕೆ ಶಿವಕುಮಾರ್ ಗೆ ರಿಲೀಫ್: ಐದು ಪ್ರಕರಣಗಳನ್ನ ರದ್ದುಗೊಳಿಸಿದ ಹೈಕೋರ್ಟ್.

ಬೆಂಗಳೂರು,ಜೂನ್,16,2023(www.justkannada.in):  ಉಪಮಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಅವರ ವಿರುದ್ಧ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

ಕಾಯ್ದೆ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ಮಾಡಿದ ಆರೋಪದ ಮೇಲೆ ದಾಖಲಾಗಿದ್ದ ಐದು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದರಿಂದ ಡಿಸಿಎಂ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ್ದರು. ಕೋವಿಡ್ ವೇಳೆಯಲ್ಲೇ  ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿದೆ ಎಂದು ಆರೋಪಿಸಿ ಅವರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿ ಆದೇಶಿಸಿದೆ.

Key words: Relief – DCM DK Shivakumar- High Court -cancel -five cases.