Sunday, August 9, 2026

BDA Apartments

Home Front Page ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ: ಸಾಕಷ್ಟು ಅಭಿವೃದ್ಧಿ ಮಾಡಿದ್ರೂ ಪ್ರಚಾರ ಪಡೆಯಲಿಲ್ಲ-ಸಚಿವ  ಹೆಚ್.ಸಿ.ಮಹದೇವಪ್ಪ.

ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ: ಸಾಕಷ್ಟು ಅಭಿವೃದ್ಧಿ ಮಾಡಿದ್ರೂ ಪ್ರಚಾರ ಪಡೆಯಲಿಲ್ಲ-ಸಚಿವ  ಹೆಚ್.ಸಿ.ಮಹದೇವಪ್ಪ.

ಮೈಸೂರು,ಜೂನ್,17,2023(www.justkannada.in): ಜನರಿಗೆ ಹೆಚ್ಚು ಸಮಯ ಕೊಡದ ಕಾರಣ ಕಳೆದ ಬಾರಿ ಸೋಲು ಕಂಡಿದ್ದೆ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ. ಸಾಕಷ್ಟು ಅಭಿವೃದ್ಧಿ ಮಾಡಿದ್ರೂ ನಾನು ಪ್ರಚಾರ ಪಡೆಯಲಿಲ್ಲ ಎಂದು ಸಚಿವ ಹೆಚ್.ಸಿ.ಮಹದೇವಪ್ಪ. ಹೇಳಿದರು.

ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ,,  ಚುನಾವಣೆಯಲ್ಲಿ ನಾನು 6 ಬಾರಿ ಗೆದ್ದಿದ್ದೇನೆ, ಮೂರು ಬಾರಿ ಸೋತಿದ್ದೇನೆ. ಮೂರು ಬಾರಿಯೂ ನನ್ನಿಂದ ನಾನೇ ಸೋತಿದ್ದೇನೆ. ಗೆದ್ದಾಗ ಮಂತ್ರಿ ಆಗುತ್ತಿದ್ದೆ, ಜನರಿಗೆ ಹೆಚ್ಚು ಸಮಯ ಕೊಡುತ್ತಿರಲಿಲ್ಲ. ಕಾರ್ಯಕರ್ತರಿಂದ ದೂರವಾಗಿದ್ದ ಕಾರಣ ಸೋಲಾಯಿತು ಅಷ್ಟೇ. ಸೋತಾಗ ಕುಗ್ಗಿಲ್ಲ, ಗೆದ್ದಾಗ ಬೀಗಿಲ್ಲ ಎಂದರು.

ನಾನು ಯಾವತ್ತೂ ಟಿಕೆಟ್ ಕೇಳಿಲ್ಲ, ನನ್ನ ಹೋರಾಟ ನೋಡಿ ಟಿಕೆಟ್ ನೀಡಿದ್ದಾರೆ. ನಾನು ತೆರೆದ ಪುಸ್ತಕ, ಯಾರು ಬೇಕಾದರೂ ನೋಡಬಹುದು. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ, ಆದರೆ ಪ್ರಚಾರ ಪಡೆಯಲಿಲ್ಲ. ದುರಾದೃಷ್ಟವಶಾತ್ ಕಾಂಗ್ರೆಸ್ಸಿಗರು ನನ್ನ ಕೆಲಸದ ಪ್ರಚಾರ ಮಾಡಲಿಲ್ಲ. ನನ್ನ ಅವಧಿಯಲ್ಲಿ ಎಲ್ಲವನ್ನೂ ಕ್ರೋಡೀಕರಿಸಿ ಉತ್ತಮ ದಸರಾ ಮಾಡಿದ್ದೇನೆ. ನಿಜವಾದ ವೈಚಾರಿಕತೆ ಹಾಗೂ ಸಾಂವಿಧಾನಿಕ ದಸರಾ ಆಚರಣೆ ಮಾಡಿದ್ದೇನೆ ಎಂದು ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಇನ್ನು ಅಕ್ಕಿ ಪೂರೈಸುವ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಹೆಚ್ಚುವರಿ ಅಕ್ಕಿ ಕೇಳಿದ್ರೆ ಚುನಾವಣೆಗೂ ಮುನ್ನ ನಮ್ಮನ್ನು ಕೇಳಿದ್ರಾ ಅಂತಾರೆ . ಪ್ರಣಾಳಿಕೆ ಬಗ್ಗೆ ಇನ್ನೊಂದು ಪಕ್ಷದ ಜೊತೆ ಚರ್ಚಿಸಲು ಆಗುತ್ತಾ..? ಎಂದು ಹೆಚ್.ಸಿ ಮಹದೇವಪ್ಪ ಚಾಟಿ ಬೀಸಿದರು.

Key words: Minister- HC Mahadevappa- media interaction-mysore