Sunday, August 9, 2026

BDA Apartments

Home Front Page ಬೆಲೆ‌ ಏರಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ನೇರ ಕಾರಣ- ಮಾಜಿ ಸಚಿವ ಆರ್.ಅಶೋಕ್

ಬೆಲೆ‌ ಏರಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ನೇರ ಕಾರಣ- ಮಾಜಿ ಸಚಿವ ಆರ್.ಅಶೋಕ್

ಮಡಿಕೇರಿ,ಜೂನ್,29,2023(www.justkannada.in): ರಾಜ್ಯದಲ್ಲಿ ಬೆಲೆ‌ ಏರಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು  ಮಾಜಿ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ.

ಮಡಿಕೇರಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯ ಸರ್ಕಾರದ ಯೋಜನೆಗಳಲ್ಲಿ ಯಾವ ಸ್ಪಷ್ಟತೆ ಇಲ್ಲ. ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ಜನರು ಗೊಂದಲದಲ್ಲಿದ್ದಾರೆ. ಮೋದಿ ತೆಗಳುವುದರ ಮೂಲಕ ವಿಷಯಾಂತರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಬೆಲೆ ಏರಿಕೆಗೂ ಪ್ರಧಾನಿ ನರೇಂದ್ರ ಮೋದಿಯನ್ನು ಕೇಳಿ ಅಂತಾರೆ. ಮೋದಿ ಟೊಮ್ಯಾಟೋ ಬೆಲೆ ಏರಿಕೆ‌ ಮಾಡಿದ್ದಾರಾ? ಬೆಲೆ‌ ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಕಾರಣ. ಸರ್ಕಾರದ ವಿರುದ್ಧ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

Key words: CM Siddaramaiah – – price- rise – former minister- R. Ashok