Sunday, September 20, 2026

BDA Apartments

ಅಕ್ಕಿ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ಕೇಂದ್ರ ಸರ್ಕಾರ- ಸ...
Home Front Page ಅಕ್ಕಿ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ಕೇಂದ್ರ ಸರ್ಕಾರ- ಸಚಿವ ಹೆಚ್.ಕೆ ಪಾಟೀಲ್ ವಾಗ್ದಾಳಿ.

ಅಕ್ಕಿ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ಕೇಂದ್ರ ಸರ್ಕಾರ- ಸಚಿವ ಹೆಚ್.ಕೆ ಪಾಟೀಲ್ ವಾಗ್ದಾಳಿ.

ಗದಗ,ಜುಲೈ,1,2023(www.justkannada.in): ಅಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ನಡುವೆ ತಿಕ್ಕಾಟ ಮುಂದುವರೆದಿದೆ. ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್,  ಅಕ್ಕಿ‌ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ‌ ಮಾಡಿದ್ದೇ ಕೇಂದ್ರ ಸರ್ಕಾರ ಎಂದು ಗುಡುಗಿದ್ದಾರೆ.

ಗದಗದಲ್ಲಿ ಇಂದು ಮಾತನಾಡಿದ ಸಚಿವ ಹೆಚ್.ಕೆ ಪಾಟೀಲ್,  ಜನರ ಮನಸ್ಸನ್ನ‌ ಕೆಡಿಸಿ ಗೊಂದಲ‌ಸೃಷ್ಠಿ ಮಾಡಿ ರಾಜಕೀಯ ಲಾಭ ಪಡೆಯುವ ಬಿಜೆಪಿ ಪ್ರಯತ್ನ ವಿಫಲವಾಗಿದೆ. ಕೇಂದ್ರ ಸರ್ಕಾರ ಅಕ್ಕಿ‌ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ‌ ಮಾಡಿದೆ. ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡಿ ಆದರೆ ರಾಜ್ಯ ಸರ್ಕಾರಕ್ಕೆ ಅಕ್ಕಿ‌ ಕೊಡಬೇಡಿ. ಇಂತಹ ನಿಲುವಿಗೆ ಆ ಪಕ್ಷದ ನಾಯಕರಿಗೆ ನಾಚಿಕೆ ಆಗುವುದಿಲ್ಲವೇ ಎಂದು ಕಿಡಿಕಾರಿದರು.ಅಕ್ಕಿ ಹೊಂದಿಸಲು ಆಗದಂತೆ ಪರಿಸ್ಥಿತಿ ನಿರ್ಮಾಣ ಮಾಡಿದ್ದೇ ಕೇಂದ್ರ ಸರ್ಕಾರ hk p...

Key words: Central government – created – situation – rice – Minister -HK Patil