Saturday, August 22, 2026

BDA Apartments

Home Front Page ಸರ್ಕಾರಿ ಬ್ಯಾಂಕ್’ಗಳ ಲಾಭ 1.04 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಳ: ನಿರ್ಮಲಾ ಸೀತಾರಾಮನ್

ಸರ್ಕಾರಿ ಬ್ಯಾಂಕ್’ಗಳ ಲಾಭ 1.04 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಳ: ನಿರ್ಮಲಾ ಸೀತಾರಾಮನ್

ಬೆಂಗಳೂರು, ಜುಲೈ 02, 2023 (www.justkannada.in): ಕಳೆದ 9 ವರ್ಷದಲ್ಲಿ ಸರ್ಕಾರಿ ಬ್ಯಾಂಕ್‌ಗಳ ಲಾಭ 1.04 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಾಗಿದೆ.

ಈ ಕುರಿತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮಾಹಿತಿ ನೀಡಿದ್ದಾರೆ.

ಸರ್ಕಾರಿ ವಲಯದ ಬ್ಯಾಂಕ್‌ಗಳ (ಪಿಎಸ್‌ಬಿಎಸ್‌) ಅಭಿವೃದ್ಧಿಗಾಗಿ ಸರ್ಕಾರ ಕೈಗೊಂಡ ಉಪಕ್ರಮಗಳ ಭಾಗವಾಗಿ ಕಳೆದ 9 ವರ್ಷದಲ್ಲಿ ಸರ್ಕಾರಿ ಬ್ಯಾಂಕ್‌ಗಳ ಲಾಭ 1.04 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಸರಕಾರಿ ಬ್ಯಾಂಕ್ ಗಳ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಸಾಂಸ್ಥಿಕ ಆಡಳಿತ, ನಿಯಂತ್ರಕ ಮಾನದಂಡ, ಸುಸ್ಥಿ ಸಾಲ ಸಮಸ್ಯೆ ನಿವಾರಣೆಯತ್ತ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಅತ್ಯುತ್ತಮ ಕಾರ್ಪೋರೇಟ್‌ ಆಡಳಿತ ತತ್ವಗಳನ್ನು ಅನುಸರಿಸುವ ಮೂಲಕ ಬ್ಯಾಂಕ್‌ಗಳು ಸಂಪೂರ್ಣ ಅಭಿವೃದ್ಧಿಯನ್ನು ಸಾಧಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.