Monday, October 12, 2026

Dasara Wishes

ನರೇಂದ್ರ ಮೋದಿ ಮೆಂಟಲಿ ವೀಕ್, ಅತ್ಯಂತ ದುರ್ಬಲ ಪ್ರಧಾನಿ- ಸಚಿವ ಆರ್.ಬಿ ತಿಮ್ಮಾ...
Happy Dasara
Home Crime ಪ್ರೀತಿಸುವಂತೆ ಹಿಂದೆ ಬಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು.

ಪ್ರೀತಿಸುವಂತೆ ಹಿಂದೆ ಬಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣು.

ಮೈಸೂರು,ಜುಲೈ,4,2023(www.justkannada.in): ಪ್ರೀತಿಸುವಂತೆ ಹಿಂದೆ ಬಿದ್ದ ಯುವಕನ ಕಿರುಕುಳ ತಾಳಲಾರದೇ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹರ್ಷಿತಾ(21) ಮೃತ ಯುವತಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು( 26) ಕಿರುಕುಳಕ್ಕೆ ಬೇಸತ್ತು ಹರ್ಷಿತಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪಿಯುಸಿ ಓದಿದ್ದ ಹರ್ಷಿತಾ ಕಂಪ್ಯೂಟರ್ ಕ್ಲಾಸ್ ಗೆ ಸೇರಿದ್ದಳು. ಈ ನಡುವೆ ಹರ್ಷಿತಾಳನ್ನ ಲವ್ ಮಾಡುತ್ತಿದ್ದ ಶಿವು ಹರ್ಷಿತಾಳ ಹಿಂದೆ ಬಿದ್ದು ಪ್ರೀತಸುವಂತೆ ಪೀಡಿಸುತ್ತಿದ್ದನಂತೆ. ಆದರೆ ಶಿವು ಮನವಿಯನ್ನ ಹರ್ಷಿತಾ ತಿರಸ್ಕರಿಸುತ್ತಿದ್ದಳು. ಈ ಮಧ್ಯೆ ಹರ್ಷಿತಾ ಮನೆಯವರು ಮದುವೆ ಸಂಬಂಧ ಕುದುರಿಸಿದ್ದರು. ಆಷಾಢ ನಂತರ ಮದುವೆ ದಿನಾಂಕ ಗೊತ್ತುಪಡಿಸಲು ನಿರ್ಧರಿಸಿದ್ದರು.

ಈ ಮಾಹಿತಿ ಅರಿತ ಶಿವು ತನ್ನನ್ನ ಪ್ರೀತಿಸಿ ಮದುವೆ ಆಗುವಂತೆ ದುಂಬಾಲು ಬಿದಿದ್ದ. ಶಿವು ಕಿರುಕುಳಕ್ಕೆ ಬೇಸತ್ತ ಹರ್ಷಿತ ಹುಳುಗಳಿಗಾಗಿ ಇಟ್ಟಿದ್ದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕೂಡಲೇ ಹರ್ಷಿತಾಳನ್ನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತಾ ಮೃತಪಟ್ಟಿದ್ದಾಳೆ. ಮಗಳ ಸಾವಿಗೆ ಶಿವು ಕಾರಣ ಎಂದು ಹರ್ಷಿತಾ ತಂದೆ ವೇಣುಗೋಪಾಲ್ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ ಮಾಡಿದ್ದಾರೆ. ಈ ಸಂಬಂಧ ಇಲವಾಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore- girl-committed- suicide-boy-love- harassed