Saturday, August 22, 2026

BDA Apartments

Home Front Page ನಾಳೆ ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ನಾಳೆ ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರು, ಜುಲೈ 09, 2023 (www.justkannada.in): ಅಂಗನವಾಡಿ ಕಾರ್ಯಕರ್ತೆಯರಿಗೆ ಜುಲೈ 10ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಸರ್ಕಾರ ನೀಡಿರುವ ಮೊಬೈಲ್‌ಗಳನ್ನು ಇದೇ 10ರಂದು ವಾಪಸ್‌ ಮಾಡುವ ಮೂಲಕ ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ತೀರ್ಮಾನಿಸಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಯುಕ್ತ ಸಂಘರ್ಷ ಸಮಿತಿ ಮಾಹಿತಿ ನೀಡಿದೆ.

ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗಳ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ’ ಎಂದು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ತಿಳಿಸಿದ್ದಾರೆ.

ಈ ಮೊಬೈಲ್‌ಗಳನ್ನು ನಾಲ್ಕು ವರ್ಷಗಳಿಂದ ಬಳಸಿರುವುದರಿಂದ ಇವುಗಳ ಸಾಮರ್ಥ್ಯ ಕುಗ್ಗಿದೆ. ಆದ್ದರಿಂದ, ಮೊಬೈಲ್‌ಗಳ ಬದಲು ಟ್ಯಾಬ್ಲೆಟ್‌ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.