Sunday, August 23, 2026

BDA Apartments

Home Front Page ಇಂದಿನಿಂದ 3ನೇ ಗ್ಯಾರಂಟಿ ಜಾರಿ: ಬಿಜೆಪಿಗೆ ಟ್ವಿಟ್ಟರ್ ನಲ್ಲಿ ಕುಟುಕಿದ ಕಾಂಗ್ರೆಸ್.

ಇಂದಿನಿಂದ 3ನೇ ಗ್ಯಾರಂಟಿ ಜಾರಿ: ಬಿಜೆಪಿಗೆ ಟ್ವಿಟ್ಟರ್ ನಲ್ಲಿ ಕುಟುಕಿದ ಕಾಂಗ್ರೆಸ್.

ಬೆಂಗಳೂರು,ಜುಲೈ,10,2023(www.justkannada.in): ರಾಜ್ಯದಲ್ಲಿ ಇಂದಿನಿಂದ 3ನೇ ಗ್ಯಾರಂಟಿ ಯೋಜನೆ ಜಾರಿಯಾಗುತ್ತಿದ್ದು ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿ ಟಾಂಗ್ ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ. ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದ್ದೇವೆ. ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ! ಗೌರವಾನ್ವಿತ ಸದನವನ್ನು, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿದೆಯೇ ಬಿಜೆಪಿ? ಎಂದು ಕಿಡಿಕಾರಿದೆ.ong

Key words: 3rd guarantee  – today- Congress – BJP – Twitter.