Tuesday, September 22, 2026

BDA Apartments

Home Crime ಬೆಂ-ಮೈ ಎಕ್ಸ್ ಪ್ರೆಸ್ ವೇಯಲ್ಲಿ ಮತ್ತೊಂದು ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಜಿಗಿದ...

ಬೆಂ-ಮೈ ಎಕ್ಸ್ ಪ್ರೆಸ್ ವೇಯಲ್ಲಿ ಮತ್ತೊಂದು ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ಜಿಗಿದ ಬೃಹತ್ ಕಂಟೇನರ್  

ರಾಮನಗರ,ಜುಲೈ,13,203(www.justkannada.in): ಬೆಂಗಳೂರು-ಮೈಸೂರು ದಶಪಥ ರಸ್ತೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಕಂಟೇನರ್  ಪಕ್ಕದ ರಸ್ತೆಗೆ ಜಿಗಿದಿದ್ದು ಸದ್ಯ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿದ್ದ ಭೀಕರ ಅಪಘಾತವೊಂದು ಅದೃಷ್ಟವಶಾತ್ ತಪ್ಪಿದೆ. ಬೃಹತ್ ಕಂಟೇನರ್ ಲಾರಿ ಎಕ್ಸ್ ಪ್ರೆಸ್ ವೇನ ಒಂದು ಬದಿಯಿಂದ ಇನ್ನೊಂದು ಬದಿ ದಾಟಿ ಸರ್ವೀಸ್ ರಸ್ತೆಯ ಗೆ ನುಗ್ಗಿದೆಯಾದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗೇಟ್ ಸಮೀಪದ  ಬೆಂ-ಮೈ ಹೆದ್ದಾರಿಯಲ್ಲಿ ಭೀಕರ ಘಟನೆ ನಡೆದಿದ್ದು. ಈ ಸಮಯದಲ್ಲಿ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚರಿಸದ ಪರಿಣಾಮ ಯಾವುದೇ ಅಪಾಯ ಸಂಭವಿಸಿಲ್ಲ. ಮೈಸೂರು ಕಡೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಬೃಹತ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.

ಬೆಂಗಳೂರು ಕಡೆಯ ಎಕ್ಸ್‌ಪ್ರೆಸ್‌ ವೇ ದಾಟಿ ಮೈಸೂರು ಕಡೆಗೆ ಹೋಗುವ ರಸ್ತೆಯನ್ನು ಹಾಯ್ದು ಎಕ್ಸ್ ಪ್ರೆಸ್ ವೇನ ತಂತಿ ಬೇಲಿ ಮುರಿದುಕೊಂಡು ಸರ್ವೀಸ್ ರಸ್ತೆಗೆ ನುಗ್ಗಿದೆ. ಲಾರಿ ರಸ್ತೆ ದಾಟಿ ಬರುತ್ತಿರುವ ದೃಶ್ಯ ಸ್ಥಳೀಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

Key words: Another -accident – Bangalore –Mysore- Expressway: container