Tuesday, September 29, 2026

BDA Apartments

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್ BDA JK_Adv BDA Adv
Home Front Page ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್.

ಶಿವಮೊಗ್ಗ,ಜುಲೈ,20,2023(www.justkannada.in): ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾನಿಲಯವು ಈ ಬಾರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿದೆ.

ಶುಕ್ರವಾರ ಘಟಿಕೋತ್ಸವದಲ್ಲಿ ಬಿಎಸ್​ವೈಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ವಿವಿ ಕುಲಪತಿ ಪ್ರೊ.ಜಗದೀಶ್ ಮಾಹಿತಿ ನೀಡಿದ್ದಾರೆ.ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಗೌರವ ಡಾಕ್ಟರೇಟ್ bsy

ಕೃಷಿ ಮತ್ತು ತೋಟಗಾರಿಕೆ ವಿವಿಯ 8ನೇ ಘಟಿಕೋತ್ಸವ ಜು.21ರಂದು ಇರುವಕ್ಕಿಯಲ್ಲಿರುವ ವಿವಿಯ ಮುಖ್ಯ ಆವರಣದಲ್ಲಿ ನಡೆಯಲಿದೆ. ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಗಳೂ ಆದ ಥಾವರ್ ಚಂದ್ ಗೆಹ್ಲೋಟ್ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದು, ಈ ಸಂದರ್ಭದಲ್ಲಿ ಬಿ.ಎಸ್. ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೊ.ಜಗದೀಶ್ ತಿಳಿಸಿದ್ದಾರೆ.

Key words: Honorary doctorate – former CM -BS Yeddyurappa