Sunday, August 23, 2026

BDA Apartments

Home Front Page ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಕೆ.

ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಕೆ.

ಬೆಂಗಳೂರು, ಜುಲೈ 21,2023(www.justkannada.in):  ರಾಜ್ಯ ವಿಧಾನಸಭೆ ಚುನಾವಣೆ  ವೇಳೆ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಆರೋಪದ ಮೇಲೆ ಸಿಎಂ ಸಿದ‍್ಧರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್ ​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.

ಈ ಹಿನ್ನೆಲೆಯಲ್ಲಿ  ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೆ.ಎಂ ಶಂಕರ ಎಂಬುವವರು ಮನವಿ ಮಾಡಿದ್ದಾರೆ. ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.

Key words: Petition – High Court – invalidation – CM -Siddaramaiah-MLA -seat.