Sunday, August 23, 2026

BDA Apartments

Home Front Page ಹೊಸ ಬಿಪಿಎಲ್ ಪಡಿತರ ಕಾರ್ಡ್’ಗೆ ಕಾದಿರುವವರಿಗೆ ರಾಜ್ಯ ಸರಕಾರದಿಂದ ಗುಡ್ ನ್ಯೂಸ್ !

ಹೊಸ ಬಿಪಿಎಲ್ ಪಡಿತರ ಕಾರ್ಡ್’ಗೆ ಕಾದಿರುವವರಿಗೆ ರಾಜ್ಯ ಸರಕಾರದಿಂದ ಗುಡ್ ನ್ಯೂಸ್ !

ಬೆಂಗಳೂರು, ಜುಲೈ 22, 2023 (www.justkannada.in): ಹೊಸ ಪಡಿತರ ಚೀಟಿ ಪಡೆಯಲು ಕಾದಿರುವವರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದೆ.

ಹೌದು. ಹೊಸ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಹೊಸ ಬಿಪಿಎಲ್ ಪಡಿತರ ಕಾರ್ಡ್ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಪಡಿತರದ ಜತೆಗೆ ಆರೋಗ್ಯ ವಿಚಾರಕ್ಕೆ ಬಂದಾಗ ಎಲ್ಲರಿಂದಲೂ ಬಿಪಿಎಲ್ ಕಾರ್ಡ್ ಗೆ ಬೇಡಿಕೆ ಇದೆ. ಹೀಗಾಗಿ ಬಿಪಿಎಲ್ ಕಾರ್ಡ್ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.