Sunday, August 16, 2026

BDA Apartments

Home Front Page ಕೆಲ ಸಚಿವರ ವಿರುದ್ದ ಅಸಮಾಧಾನ: ಸಿಎಂ ಸಿದ್ಧರಾಮಯ್ಯಗೆ 20ಕ್ಕೂ ಹೆಚ್ಚು ಸ್ವಪಕ್ಷ ಶಾಸಕರಿಂದಲೇ ದೂರು..

ಕೆಲ ಸಚಿವರ ವಿರುದ್ದ ಅಸಮಾಧಾನ: ಸಿಎಂ ಸಿದ್ಧರಾಮಯ್ಯಗೆ 20ಕ್ಕೂ ಹೆಚ್ಚು ಸ್ವಪಕ್ಷ ಶಾಸಕರಿಂದಲೇ ದೂರು..

ಬೆಂಗಳೂರು,ಜುಲೈ,25,2023(www.justkannada.in):  ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಕೆಲ ಸಚಿವರ ವಿರುದ್ಧ ಸ್ವಪಕ್ಷದ ಶಾಸಕರೇ ಸಿಎಂ ಸಿದ್ಧರಾಮಯ್ಯಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಸಚಿವರ ಹಾಗೂ ತಮ್ಮದೇ ಪಕ್ಷದ ಕಾಂಗ್ರೆಸ್​ ಶಾಸಕರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಶಾಸಕರು ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದು ಶಾಸಕಾಂಗ ಸಭೆಗೆ ಆಗ್ರಹಿಸಿದ್ದಾರೆ ಎನ್ನಲಾಗಿದೆ. ಸಚಿವರು ದುರಹಂಕಾರ ತೋರಿಸುತ್ತಿದ್ದಾರೆ. ತಮ್ಮ ಕೆಲಸ ಮಾಡಿಕೊಡುತ್ತಿಲ್ಲ ಎಂದು ಪತ್ರದಲ್ಲಿ ದೂರಿದ್ದಾರೆ.

ಶಾಸಕರಿಂದ ದೂರು ಬಂದ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ ಶಾಸಕರ ಅಹವಾಲು ಆಲಿಸಲೆಂದೇ ಇದೇ ಜುಲೈ 27ರಂದು ಕಾಂಗ್ರೆಸ್​ ಶಾಸಕಾಂಗ ಸಭೆ ಕರೆದಿದ್ದಾರೆ. ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಹಾಗೂ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಸಿಎಲ್‌ಪಿ ಸಭೆ ನಡೆಯಲಿದ್ದು, ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

Key words: congress-MLAs -complain – CM Siddaramaiah- Against-ministers