Wednesday, August 12, 2026

BDA Apartments

Home Front Page ತೀವ್ರ ಕುತೂಹಲ ಮೂಡಿಸಿದ ಬಿ.ಕೆ. ಹರಿಪ್ರಸಾದ್- ಡಿ.ಕೆ.ಶಿವಕುಮಾರ್ ಭೇಟಿ

ತೀವ್ರ ಕುತೂಹಲ ಮೂಡಿಸಿದ ಬಿ.ಕೆ. ಹರಿಪ್ರಸಾದ್- ಡಿ.ಕೆ.ಶಿವಕುಮಾರ್ ಭೇಟಿ

ಬೆಂಗಳೂರು, ಜುಲೈ 26, 2023 (www.justkannada.in): ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳವಾರ ರಾತ್ರಿ ಭೇಟಿ ಮಾಡಿದ್ದಾರೆ.

ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಕಾರಣಕ್ಕೆ ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿ.ಕೆ.ಹರಿಪ್ರಸಾದ್ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.

ಇದೀಗ ಬಿ.ಕೆ. ಹರಿಪ್ರಸಾದ್‌ ಅವರನ್ನು ಶಿವಕುಮಾರ್‌ ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ. ಹರಿಪ್ರಸಾದ್ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಹರಿಪ್ರಸಾದ್‌ ಹೇಳಿಕೆ ಕಾಂಗ್ರೆಸ್‌’ನಲ್ಲಿ ಆರೋಪ- ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದ್ದಂತೆ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಕೆಲಹೊತ್ತು ಸಮಾಲೋಚನೆ ನಡೆಸಿದ್ದಾರೆ.

ಪಕ್ಷದೊಳಗಿನ ಆಂತರಿಕ ವಿಚಾರಗಳ ಬಗ್ಗೆ ಹರಿಪ್ರಸಾದ್‌ ಮತ್ತು ಶಿವಕುಮಾರ್‌ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈ ವೇಳೆ ಸಚಿವ ಕೆ.ಎಚ್. ಮುನಿಯಪ್ಪ ಇದ್ದರು.