Saturday, October 17, 2026

Dasara Wishes

Happy Dasara
Home Crime ಕಲುಷಿತ ನೀರು ಸೇವಿಸಿ ಮಹಿಳೆ ಸಾವು: 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ.

ಕಲುಷಿತ ನೀರು ಸೇವಿಸಿ ಮಹಿಳೆ ಸಾವು: 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ.

ಚಿತ್ರದುರ್ಗ,ಆಗಸ್ಟ್,1,2023(www.justkannada.in): ಕಲುಷಿತ ನೀರು ಸೇವಿಸಿ ಮಹಿಳೆ ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಕವಾಡಿಗರ ಹಟ್ಟಿ ಬಡಾವಣೆಯಲ್ಲಿ   ಈ ಘಟನೆ ನಡೆದಿದೆ. ಮಂಜುಳ(21) ಮೃತಪಟ್ಟ ಮಹಿಳೆ. ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು ಮೂವರ ಸ್ಥಿತಿ ಗಂಭೀರವಾಗಿದೆ. ಅಸ್ವಸ್ಥರೆಲ್ಲರನ್ನೂ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಜುಳ ಸಹ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಮಂಜುಳ ಸಾವನ್ನಪ್ಪಿದ್ದು, ನೀರಿನ ಟ್ಯಾಂಕ್ ತೊಳೆಯದಿರುವುದೇ ಇದಕ್ಕೆ ಕಾರಣ ಎಂದು ನಗರಸಭೆ ಅಧಿಕಾರಿಗಳ ವಿರುದ್ಧ ಕವಾಡಿಗರ ಹಟ್ಟಿ ಬಡಾವಣೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Woman -dies – drinking- contaminated water- Chitradurga