Tuesday, August 18, 2026

BDA Apartments

Home Front Page ಆ.3 ರಂದು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರನ್ನ ಭೇಟಿಯಾಗಲಿದ್ದಾರೆ ಸಿಎಂ ಸಿದ್ಧರಾಮಯ್ಯ.

ಆ.3 ರಂದು ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರನ್ನ ಭೇಟಿಯಾಗಲಿದ್ದಾರೆ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಆಗಸ್ಟ್,1,2023(www.justkannada.in): ಸಿಎಂ  ಸಿದ್ದರಾಮಯ್ಯ ಅವರು ಆಗಸ್ಟ್ 3ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರಸಚಿವರನ್ನ ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿರುವ ಸಿಎಂ ಸಿದ್ಧರಾಮಯ್ಯ, ಭಾರತೀಯ ಆಹಾರ ನಿಗಮ ರಾಜ್ಯಕ್ಕೆ ಅಕ್ಕಿ ನಿರಾಕರಿಸುವುದು ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸುವ ನಿರೀಕ್ಷೆಯಿದೆ.

ಹಾಗೆಯೇ ಅದೇ ದಿನ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ಇನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಲಿದ್ದು, ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳ ಸ್ಥಿತಿಗತಿ ಕುರಿತು ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಆಗಸ್ಟ್ 2 ರಂದು ದೆಹಲಿಗೆ ತೆರಳಲಿದ್ದಾರೆ.

Key words: CM Siddaramaiah -will –meet- PM Modi – Union Ministers -August 3.