Monday, September 14, 2026

BDA Apartments

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ, ಮಾಜಿ ಸಿ...
Home Cinema ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ನಿಧನಕ್ಕೆ ಸಿಎಂ ಸಿದ್ಧರಾಮಯ್ಯ, ಮಾಜಿ ಸಿಎಂ ಬಿಎಸ್​ ವೈ ಸೇರಿ...

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ನಿಧನಕ್ಕೆ ಸಿಎಂ ಸಿದ್ಧರಾಮಯ್ಯ, ಮಾಜಿ ಸಿಎಂ ಬಿಎಸ್​ ವೈ ಸೇರಿ ಗಣ್ಯರಿಂದ ಸಂತಾಪ.

ಬೆಂಗಳೂರು,ಆಗಸ್ಟ್,7,2023(www.justkannada.in):  ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ, ಮಾಜಿ ಸಿಎಂ ಬಿಎಸ್​ ವೈ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ಧರಾಮಯ್ಯ ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಕಂಬನಿ ಮಿಡಿದಿದ್ದಾರೆ.

ಇನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟ್ವಿಟ್ ಮಾಡಿ ಸಂತಾಪ ಸೂಚಿಸಿದ್ದು, ಕನ್ನಡ ಚಿತ್ರರಂಗದ ಖ್ಯಾತ ಕಲಾವಿದ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಕಾಲಿಕ ನಿಧನ ಹೊಂದಿದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ದೇವರು ಅವರ ಕುಟುಂಬ ಹಾಗೂ ಆಪ್ತೇಷ್ಟರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಹೇಳಿದ್ದಾರೆ.

ಇನ್ನು ಸ್ಪಂದನಾ ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸಚಿವ ಹೆಚ್.ಸಿ ಮಹದೇವಪ್ಪ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Key words: CM Siddaramaiah-BS Yeddyurappa- condole – actor Vijayaraghavendra’s- wife – death