Monday, September 21, 2026

BDA Apartments

ಮಾಜಿ ಸಚಿವ ಹೆಚ್.ಡಿ ರೇವಣ್ಣರ ಅತ್ಯಾಪ್ತ, ಜೆಡಿಎಸ್ ಮುಖಂಡನ ಬರ್ಬರ ಹತ್ಯೆ BDA JK_Adv...
Home Crime ಮಾಜಿ ಸಚಿವ ಹೆಚ್.ಡಿ ರೇವಣ್ಣರ ಅತ್ಯಾಪ್ತ, ಜೆಡಿಎಸ್ ಮುಖಂಡನ ಬರ್ಬರ ಹತ್ಯೆ.

ಮಾಜಿ ಸಚಿವ ಹೆಚ್.ಡಿ ರೇವಣ್ಣರ ಅತ್ಯಾಪ್ತ, ಜೆಡಿಎಸ್ ಮುಖಂಡನ ಬರ್ಬರ ಹತ್ಯೆ.

ಹಾಸನ, ಆಗಸ್ಟ್,9,2023(www.justkannada.in):  ಮಾಜಿ ಸಚಿವ ಹೆಚ್.ಡಿ ರೇವಣ್ಣರ ಅತ್ಯಾಪ್ತ, ಜೆಡಿಎಸ್ ಮುಖಂಡರೊಬ್ಬರನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಗ್ರಾನೈಟ್ ಫ್ಯಾಕ್ಟರಿ ಎದುರೇ  ಈ ಘಟನೆ ನಡೆದಿದೆ.  ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಅತ್ಯಾಪ್ತ, ಗ್ರಾನೈಟ್ ಉದ್ಯಮಿ ಕೃಷ್ಣೇಗೌಡ(53) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣೇಗೌಡರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಎಸ್​ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಹಾಸನ ಕ್ಷೇತ್ರದ JDS ಶಾಸಕ ಸ್ವರೂಪ್ ಪ್ರಕಾಶ್​ ಅವರು ಆಗಮಿಸಿದ್ದಾರೆ. ಈ ಕುರಿತು ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Key words: killing- former minister -HD Revanna’s- close- friend-JDS leader.