Tuesday, September 29, 2026

BDA Apartments

ರಾತ್ರಿ ಮಲಗಿದ್ದಲ್ಲೇ ಸಾವನ್ನಪ್ಪಿದ ಪೊಲೀಸ್ ಕಾನ್ಸ್ ಟೇಬಲ್ BDA JK_Adv BDA Adv
Home Crime ರಾತ್ರಿ ಮಲಗಿದ್ದಲ್ಲೇ ಸಾವನ್ನಪ್ಪಿದ ಪೊಲೀಸ್ ಕಾನ್ಸ್ ಟೇಬಲ್.

ರಾತ್ರಿ ಮಲಗಿದ್ದಲ್ಲೇ ಸಾವನ್ನಪ್ಪಿದ ಪೊಲೀಸ್ ಕಾನ್ಸ್ ಟೇಬಲ್.

ರಾಯಚೂರು,ಆಗಸ್ಟ್ 11,2023(www.justkannada.in):  ಆರೋಗ್ಯದಿಂದ್ದ ಪೊಲೀಸ್​ ಕಾನ್ಸ್​ಟೇಬಲ್ ಒಬ್ಬರು ರಾತ್ರಿ ಮಲಗಿದ್ದಲ್ಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆ ಕಾನ್ಸ್​ಟೇಬಲ್​ ಬಸನಗೌಡ(34) ಹೃದಯಾಘಾತದಿಂದ ಸಾವನ್ನಪ್ಪಿದವರು.  ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾಗಿದ್ದ ಬಸನಗೌಡ ಅವರು ಯಾವುದೇ ಬಿಪಿ,ಶುಗರ್ ಹಾಗೂ ಹೃದಯ ಸಂಬಂಧಿ ಖಾಯಿಲೆ ಇಲ್ಲದೇ ಆರೋಗ್ಯವಾಗಿದ್ದರು ಎನ್ನಲಾಗಿದೆ. ಆದರೆ, ನಿನ್ನೆ  ರಾತ್ರಿ ಮಲಗಿದ್ದಲ್ಲೇ ಬಸನಗೌಡಗೆ ಹೃದಯಾಘಾತವಾಗಿದೆ. ಇನ್ನು ಸಿಬ್ಬಂದಿ ಸಾವಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ.

ಹೃದಯಘಾತದಿಂದ ನಟ ಪುನೀತ್ ರಾಜ್​ ಕುಮಾರ್ ಸಾವಿನ ಬಳಿಕ  ಕಳೆದ ಐದು ದಿನಗಳ ಹಿಂದಷ್ಟೇ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯ ರಾಘವೇಂದ್ರ ಅವರು ಹೃದಯಾಘಾತದಿಂದ ಮೃತಪಟ್ಟರು. ಇತ್ತೀಚೆಗೆ ಚಿಕ್ಕ ಚಿಕ್ಕ ವಯಸ್ಸಿನವರಿಗೆ ಹೃದಯಾಘಾತ ಸಂಭವಿಸುತ್ತಿರುವುದು ಆತಂಕವನ್ನುಂಟು ಮಾಡಿದೆ.

Key words: police -constable – died – sleeping – night.