Saturday, August 22, 2026

BDA Apartments

Home Front Page ಸಂಸತ್ತಿನಲ್ಲಿ ಅಂಗೀಕಾರವಾಗಿದ್ದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ.

ಸಂಸತ್ತಿನಲ್ಲಿ ಅಂಗೀಕಾರವಾಗಿದ್ದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ.

ನವದೆಹಲಿ, ಆಗಸ್ಟ್,12,2023(www.justkannada.in):  ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕರವಾಗಿದ್ದ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ದೆಹಲಿ ಸೇವಾ ಮಸೂದೆ ಮತ್ತು ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ (ಡಿಪಿಡಿಪಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಕ್ರವಾರ ತಡರಾತ್ರಿ ಸಹಿ ಹಾಕಿದ್ದಾರೆ. ಇದರ ಜತೆಗೆ ಇಂದು ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆಗೂ ಕೂಡ ಸಹಿ ಹಾಕಿದ್ದಾರೆ.

ದೆಹಲಿ ಸೇವಾ ಮಸೂದೆಯನ್ನು ಆಮ್ ಆದ್ಮಿ ನೇತೃತ್ವದ ದೆಹಲಿ ಸರ್ಕಾರ ಬಲವಾಗಿ ವಿರೋಧಿಸಿದ್ದು. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಮಸೂದೆಯನ್ನು ತಂದಿದೆ. ನಮ್ಮ ಸರ್ಕಾರದ ಮೇಲೆ ಹಿಡಿತವನ್ನು ಸಾಧಿಸಲು ಪ್ರಯತ್ನ ಮಾಡುತ್ತಿದೆ ಎಂದು ಅಕ್ರೋಶ ವ್ಯಕ್ತಪಡಿಸಿದೆ.

Key words: President- Sign- four bills -passed – Parliament.