Sunday, August 23, 2026

BDA Apartments

Home Front Page ಮುಂಗಾರು ಬಿರುಸು ಸಾಧ್ಯತೆ: ಆಗಸ್ಟ್ 19 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂಗಾರು ಬಿರುಸು ಸಾಧ್ಯತೆ: ಆಗಸ್ಟ್ 19 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು, ಆಗಸ್ಟ್ 13, 2023 (www.justkannada.in): ಮುಂದಿನ ದಿನಗಳಲ್ಲಿ ಮುಂಗಾರು ಬಿರುಸಾಗಲಿದೆ. ಆಗಸ್ಟ್ 19 ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ.

ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 19ರವರೆಗೆ ಭಾರಿ ಮಳೆಯಾಗಲಿದೆ.

ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಬೆಳಗಾವಿ, ಬೀದರ್, , ಹಾವೇರಿ, ಧಾರವಾಡ, ಗದಗ ಕಲಬುರಗಿ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ ಮುಂದಿನ ಐದು ದಿನಗಳವರೆಗೆ ಮತ್ತು ಹಿಮಾಚಲ ಪ್ರದೇಶ, ಬಿಹಾರ, ಉಪ ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸಾಧ್ಯತೆ ಇದೆ.