Sunday, August 23, 2026

BDA Apartments

Home Crime ಬಸ್ ಹರಿದು ನಾಲ್ಕು ವರ್ಷದ ಬಾಲಕಿ ಸಾವು.

ಬಸ್ ಹರಿದು ನಾಲ್ಕು ವರ್ಷದ ಬಾಲಕಿ ಸಾವು.

ಬೆಂಗಳೂರು,ಆಗಸ್ಟ್,16,2023(www.justkannada.in): ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬಿಎಂಟಿಸಿ ಬಸ್ ಹರಿದು ನಾಲ್ಕು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತಪಟ್ಟ ಬಾಲಕಿ.   ತಂದೆ ಪ್ರಸನ್ನ ಅವರ ಜೊತೆ ಬಾಲಕಿ  ಬೈಕ್ ​ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಪ್ರಸನ್ನ ಬೈಕ್ ​ನ ಎಡಬದಿಗೆ ಬಿದ್ದರೆ ಪೂರ್ವಿ ಬೈಕ್ ​​ನ ಬಲಬದಿ ಬಿದ್ದಿದ್ದಾಳೆ. ಇದೇ ವೇಳೆ ಬಸ್ ಪೂರ್ವಿ ಮೇಲೆ ಹರಿದುಹೋಗಿದೆ. ಆಕೆ ಸ್ಥಳದಲ್ಲೇ  ಮೃತಪಟ್ಟಿದ್ದಾಳೆ.

ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಬಿಎಂಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Key words: four-year-old girl -died – bus –overturned-bangalore