Sunday, August 23, 2026

BDA Apartments

Home Front Page ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಶಾಕ್: ರಾಜ್ಯಾದ್ಯಂತ 50 ಕಡೆಗಳಲ್ಲಿ ಲೋಕಾಯುಕ್ತ ದಾಳಿ, ಪರಿಶೀಲನೆ.

ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಶಾಕ್: ರಾಜ್ಯಾದ್ಯಂತ 50 ಕಡೆಗಳಲ್ಲಿ ಲೋಕಾಯುಕ್ತ ದಾಳಿ, ಪರಿಶೀಲನೆ.

ಬೆಂಗಳೂರು, ಆಗಸ್ಟ್.17,2023(www.justkannada.in):  ರಾಜ್ಯಾದ್ಯಂತ ಏಕಕಾಲದಲ್ಲಿ 50 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ನಗರ, ಮೈಸೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಬೀದರ್, ಧಾರವಾಡ, ರಾಯಚೂರು, ಮಡಿಕೇರಿಯಲ್ಲಿ 200 ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿಯಿಂದ ದಾಳಿಯಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲೇ ಸುಮಾರು 23 ಕಡೆಗಳಲ್ಲಿ ಲೋಕಾಯುಕ್ತ ರೇಡ್ ಆಗಿದೆ. ಮಹದೇವಪುರ ವಯಲಯದ ಆರ್ ಐ ನಟರಾಜು ಅವರ ಗಿರಿ ನಗರ ಆವಲಹಳ್ಳಿಯಲ್ಲಿರುವ ಮನೆಗಳ ಮೇಲೆ ದಾಳಿಯಾಗಿದೆ.

ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಕೆ.ಮಹೇಶ್ ಪತ್ನಿ BBMP ಎಇ ಹೆಚ್.ಭಾರತಿ ಮನೆ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳು ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಅವರ​​ ಮನೆ ಮೇಲೆ ದಾಳಿಯಾಗಿದೆ.

ಮಡಿಕೇರಿಯಲ್ಲಿ ಕೊಡಗು ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಮಡಿಕೇರಿಯ ಫೀಲ್ಡ್‌ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿಯ ನಂಜುಂಡೇಗೌಡ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ.

ಬೀದರ್ ಜಿಲ್ಲೆಯ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್​ಟೇಬಲ್​ ವಿಜಯಕುಮಾರ್ ಮನೆ ಮೇಲೆ ದಾಳಿ ನಡೆದಿದೆ. ಹುಮ್ನಾಬಾದ್ ಪಟ್ಟಣದ ಟೀಚರ್ ಕಾಲೋನಿ ಹುಚಕನಳ್ಳಿ ಗ್ರಾಮದ ಮನೆ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಮಹತ್ವದ ದಾಖಲೆ ಪರಿಶೀಲಿಸುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ RFO ಸತೀಶ್ ಮನೆಗಳ ಮೇಲೆ ರೇಡ್​​​​ ಆಗಿದೆ. ಶಿವಮೊಗ್ಗದಲ್ಲಿರುವ ಸತೀಶ್ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. ಇನ್ಸ್ಪೆಕ್ಟರ್ ರಾಷ್ಟ್ರಪತಿ ಹಾಗು ಮಧುಸೂಧನ್ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ.

Key words:  Lokayukta –attack- inspection – 50 places -across – state.