ರಾಮನಗರ,ಆಗಸ್ಟ್,17,2023(www.justkannada.in): ಗೂಡ್ಸ್ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮತ್ತೊಬ್ಬ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.![]()
ಸುಚೀತ್(10) ಮೃತ ವಿದ್ಯಾರ್ಥಿ. ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಆಗಸ್ಟ್ 9ರಂದು ಟ್ಯೂಷನ್ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಗೂಡ್ಸ್ ವಾಹನ ಡಿಕ್ಕಿಯಾಗಿ ಶಾಲಿನಿ(8), ದರ್ಶನ್(5) ಸ್ಥಳದಲ್ಲೇ ಮೃತಪಟ್ಟಿದ್ದರು.
ಬದುಕುಳಿದಿದ್ದ ಸುಚೀತ್ ಅನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಸುಚಿತ್ ಸಾವನ್ನಪ್ಪಿದ್ದು, ಈ ಕುರಿತು ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Key words: Another -student – died-seriously- injured in – goods vehicle -collision







