Monday, September 28, 2026

BDA Apartments

ಹಾಡಹಗಲೇ ಚಿನ್ನದ ವ್ಯಾಪಾರಿ ಮತ್ತು ಪತ್ನಿಗೆ ಚಾಕು ಇರಿತ BDA JK_Adv BDA Adv
Home Crime ಹಾಡಹಗಲೇ ಚಿನ್ನದ ವ್ಯಾಪಾರಿ ಮತ್ತು ಪತ್ನಿಗೆ ಚಾಕು ಇರಿತ.

ಹಾಡಹಗಲೇ ಚಿನ್ನದ ವ್ಯಾಪಾರಿ ಮತ್ತು ಪತ್ನಿಗೆ ಚಾಕು ಇರಿತ.

ಮೈಸೂರು,ಆಗಸ್ಟ್,17,2023(www.justkannada.in): ಗೃಹಪ್ರವೇಶ ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಬಂದ ಅಪರಿಚಿತರು ಹಾಡಹಗಲೇ ಚಿನ್ನದ ವ್ಯಾಪಾರಿ ಮತ್ತು ಪತ್ನಿಯ ಮೇಲೆ ಚಾಕು ಇರಿದು ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಹೂಟಗಳ್ಳಿಯ ಕೆಎಚ್ ಬಿ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.  ಬಾಬುರಾವ್ (57), ಪತ್ನಿ ಕಮಲಬಾಯಿ (52) ಚಾಕು ಇರಿತಕ್ಕೆ ಒಳಗಾದವರು. ಅಪರಿಚಿತರಿಬ್ಬರು ಗೃಹಪ್ರವೇಶ ಆಹ್ವಾನ ಪತ್ರ ನೀಡುವ ನೆಪದಲ್ಲಿ ಬಂದು ಚಿನ್ನದ ವ್ಯಾಪಾರಿ ಬಾಬುರಾವ್ ರನ್ನ ನಿಮ್ಮ ಪುತ್ರ ಹರೀಶ್ ಎಲ್ಲಿ ಎಂದು ಕೇಳಿದ್ದಾರೆ. ಹರೀಶ್ ಮನೇಲಿ ಇಲ್ಲ ಎಂದು ಬಾಬುರಾವ್ ಎಂದು ಹೇಳಿದ್ದಾರೆ.

ಈ ವೇಳೆ ಕುಪಿತಗೊಂಡ ಅಪರಿಚಿತರಿಬ್ಬರು ಬಾಬುರಾವ್ ಮತ್ತು ಪತ್ನಿ ಕಮಲಬಾಯಿಗೆ ಚಾಕುವಿನಿಂದ ಇರಿದಿದ್ದಾರೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಜಯನಗರ ಠಾಣೆ ಪೋಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Key words: gold merchant -his wife – stabbed -mysore