Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್.

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್.

ಶಿವಮೊಗ್ಗ,ಆಗಸ್ಟ್,22,2023(www.justkannada.in): ಲಂಚ ಸ್ವೀಕರಿಸುವಾಗ ಉಪ ತಹಶೀಲ್ದಾರ್  ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ ಉಪ ತಹಶೀಲ್ದಾರ್ ಪರಮೇಶ್ವರಪ್ಪ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ದಾಳಿ ಮಾಡಿದ್ದರು. ಉಪ ತಹಶೀಲ್ದಾರ್ ಪರಮೇಶ್ವರಪ್ಪ ಅವರು ಜಮೀನು ಖಾತೆ ಮಾಡಲು 40 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ನಡುವೆ  30 ಸಾವಿರ ರೂಪಾಯಿ ಪಡೆಯುವಾಗ ಲೋಕಾಯಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.

Key words: Deputy Tehsildar – Lokayukta- trap – accepting- bribe.