Friday, October 16, 2026

Dasara Wishes

Happy Dasara
Home Crime ಶಾಸಕರ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು..

ಶಾಸಕರ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು..

ಕಲ್ಬುರ್ಗಿ,ಆಗಸ್ಟ್,24,2023(www.justkannada.in):  ಶಾಸಕರೊಬ್ಬರ ನಿವಾಸದ ಆವರಣೆದಲ್ಲಿ ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.

ಕಲಬುರಗಿಯ ಶರಣ‌ನಗರದಲ್ಲಿರುವ ಜೇವರ್ಗಿ ಶಾಸಕ ಡಾ.ಅಜಯ್‌ ಸಿಂಗ್ ನಿವಾಸದ ಆವರಣದಲ್ಲಿ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. ದೇವಪ್ಪ(35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತ ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿಯಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಶಾಸಕರ ನಿವಾಸದ ಆವರಣದಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು succide

ಇನ್ನು ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಕುರಿತು  ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words:  man-committed -suicide – MLA’s -residence.