Wednesday, August 12, 2026

BDA Apartments

Home Front Page ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಸ್ಥಳಾಂತರ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್.

ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಸ್ಥಳಾಂತರ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್.

ಮೈಸೂರು,ಆಗಸ್ಟ್,24,2023(www.justkannada.in): ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಸ್ಥಳಾಂತರ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಮೊದಲು ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ಬೆಳಗಾವಿಯಲ್ಲಿ ಚಾಲನೆ ನೀಡಲು ನಿರ್ಧರಿಸಲಾಗತ್ತು. ನಂತರ ಕಾರ್ಯಕ್ರಮವನ್ನ ಮೈಸೂರಿಗೆ ಶಿಫ್ಟ್ ಮಾಡಲಾಗಿದ್ದು ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ.

ಈ ವಿಚಾರ ಕುರಿತು ಮೈಸೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಕಾರ್ಯಕ್ರಮ ಸ್ಥಳಾಂತರ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ.  ಬೆಳಗಾವಿಯಲ್ಲಿ ಮತ್ತೊಂದು ಕಾರ್ಯಕ್ರಮ ಆಯೋಜಿಸಲಾಗುವುದು. ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಆ.30ರಂದು ಫಲಾನುಭವಿಗಳ ಬ್ಯಾಂಕ್​ ಖಾತೆಗೆ ₹2000 ಜಮೆ ಆಗಲಿದೆ.

ಫಲಾನುಭವಿಗಳ ಮೊಬೈಲ್​​ಗೆ ಕೂಡಲೇ ಮೆಸೇಜ್ ಬರಲಿದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ, ಹಣ ಬ್ಯಾಂಕ್​ಗೆ ಡೆಪಾಸಿಟ್ ಆಗಿದೆ. ಸರ್ವರ್​ ಸಮಸ್ಯೆಯಾದರೆ ಹಣ ಜಮೆ ತಡವಾಗಬಹುದು ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: no politics – relocation – Grihalakshmi Yojana –programme-DCM DK Shivakumar.