Saturday, October 24, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ರಾಜ್ಯ ಬಿಜೆಪಿ ‘ದಂಡ’ನಾಯಕರು, ಚಕ್ರವರ್ತಿ, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ- ಕಾಲೆಳೆದ...

ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ರಾಜ್ಯ ಬಿಜೆಪಿ ‘ದಂಡ’ನಾಯಕರು, ಚಕ್ರವರ್ತಿ, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ- ಕಾಲೆಳೆದ ಕಾಂಗ್ರೆಸ್.

ಬೆಂಗಳೂರು,ಆಗಸ್ಟ್,26,2023(www.justkannada.in):  ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ಕೊಟ್ಟಿದ್ದ ವೇಳೆ ಬಿಜೆಪಿ ನಾಯಕರು ಜನಸಾಮನ್ಯರ ಜೊತೆ ನಿಂತು ಕೈಬೀಸಿದ ಬಗ್ಗೆ ರಾಜ್ಯ ಕಾಂಗ್ರೆಸ್ ಟ್ವಿಟ್ ಮಾಡಿ ಬಿಜೆಪಿಯ ಕಾಲೆಳೆದಿದೆ.

ಚಂದ್ರಯಾನ-3 ಯಶಸ್ವಿ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದಿಸಿದರು. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ  ರೋಡ್ ಶೋ ನಡೆಸಿದ್ದರು. ಈ ವೇಳೆ ರಾಜ್ಯ ಬಿಜೆಪಿ ನಾಯಕರೆಲ್ಲಾ ಜನರ ಮಧ್ಯೆ ನಿಂತು ಕೈಬಿಸಿದ್ದರು.

ಈ ಕುರಿತು ಟ್ವಿಟ್ ಮಾಡಿ ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ.. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ?  ಎಂದು ಲೇವಡಿ ಮಾಡಿದೆ.

ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ!

ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ರಾಜ್ಯ ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ಬಿಜೆಪಿ ನಾಯಕರಿಗೆ ರಾಜ್ಯ ಕಾಂಗ್ರೆಸ್ ಟಾಂಗ್ ನೀಡಿದೆ.

ಸರ್ವಾಧಿಕಾರಿ”ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ?

ಹಾಗೆಯೇ ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವರುಗಳು, ಹಾಲಿ ಶಾಸಕರುಗಳು, ಹೀಗೆ ಬೀದಿಪಾಲಾಗಿದ್ದಾರೆ ಎಂದರೆ “ಸರ್ವಾಧಿಕಾರಿ”ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ? ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ ಬಿಜೆಪಿ..? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Key words: bjp-leaders-congress-tweet-PM Modi-Bangalore