Saturday, August 1, 2026

BDA Apartments

Home Front Page ಬಿಜೆಪಿ ವಿರುದ್ಧ ಮತ್ತೆ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಎಸ್.ಟಿ.ಸೋಮಶೇಖರ್

ಬಿಜೆಪಿ ವಿರುದ್ಧ ಮತ್ತೆ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಎಸ್.ಟಿ.ಸೋಮಶೇಖರ್

ಬೆಂಗಳೂರು, ಆಗಸ್ಟ್ 27, 08,2023 (www.justkannada.in): ಬಿಜೆಪಿ ವಿರುದ್ಧ ಪರೋಕ್ಷವಾಗಿ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಹೊಗಳಿ ಮಾತನಾಡಿದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಅವರು ಇಸ್ರೋಗೆ ಆಗಮಿಸಿದ ವೇಳೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಮೋದಿ ಕಾರ್ಯಕ್ರಮಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಿಕೊಡುವಂತೆ ಪಕ್ಷದಿಂದ ಸೂಚಿಸಲಾಗಿತ್ತು. ಅದರಂತೆ ಬಸ್ ವ್ಯವಸ್ಥೆ ಮಾಡಿಕೊಟ್ಟಿದ್ದೇನೆ. ಆದರೆ ನನಗೆ ಯಾವುದೇ ಆಹ್ವಾನ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನನ್ನ ಕ್ಷೇತ್ರಕ್ಕೆ ಸರ್ಕಾರದಿಂದ ಅನುದಾನ ನೀಡುವ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ್ದೆ. ಆ ಬಳಿಕ ಸಿಎಂ ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ಬಗ್ಗೆ ಒಳ್ಳೆಯ ಮಾತುಗಳನ್ನು ಆಡಿದ್ದಕ್ಕೆ ಮೋದಿ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿಲ್ಲ ಎಂದು ಗುಡುಗಿದ್ದಾರೆ.