Tuesday, September 22, 2026

BDA Apartments

Home Front Page ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್: ರಾಜ್ಯ ಕಾಂಗ್ರೆಸ್ ವ್ಯಂಗ್ಯ.

ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್: ರಾಜ್ಯ ಕಾಂಗ್ರೆಸ್ ವ್ಯಂಗ್ಯ.

ಬೆಂಗಳೂರು,ಸೆಪ್ಟಂಬರ್,1,2023(www.justkannada.in):  ಕಾಂಗ್ರೆಸ್ ನ 40 ರಿಂದ 45 ಮಂದಿ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಗೆ ರಾಜ್ಯ ಕಾಂಗ್ರೆಸ್ ಘಟಕ ತಿರುಗೇಟು ನೀಡಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಬಿ.ಎಲ್ ಸಂತೋಷ್ ಅವರು ಸ್ವತಃ ಬಿಜೆಪಿ ಶಾಸಕರೊಂದಿಗೇ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ.  ಬಿಎಸ್​ ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ ಹಲವು ಬಿಜೆಪಿ ಶಾಸಕರು, ನಾಯಕರೇ ಗೈರಾಗಿದ್ದರು. ಇನ್ನೂ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್ ಎಂದು ವ್ಯಂಗ್ಯವಾಡಿದೆ.ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎನ್ನುವುದು ಶತಮಾನದ ಜೋಕ್ congress1 congress1 1

ಸುಳ್ಳು ಹೇಳಿಕೊಂಡು ತಿರುಗುವ ಮೊದಲು ಸಂತೋಷ್ ಅವರು ತಮ್ಮ ಪಕ್ಷದ ಶಾಸಕರೊಂದಿಗೆ ಸಂಪರ್ಕ ಹಾಗೂ ವಿಶ್ವಾಸವನ್ನು ಹೊಂದಲು ಪ್ರಯತ್ನಿಸಲಿ ಎಂದು ಕಾಂಗ್ರೆಸ್ ಟಾಂಗ್ ನೀಡಿದೆ.

Key words: Joke of the century – Congress -MLAs – touch-BL Santhosh