Sunday, August 23, 2026

BDA Apartments

Home Front Page ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ.

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ.

ಬೆಂಗಳೂರು,ಸೆಪ್ಟಂಬರ್,7,2023(www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ನಡೆಯುತ್ತಿರುವ ವೇಳೆ ಹಣ ಜಮಾವಣೆ ಮಾಡಲು ಗೊಂದಲ ಉಂಟಾಗಬಹುದು ಎಂದು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಫಲಾನುಭವಿಗಳಿಗೆ ಹಣ ಜಮಾವಣೆ ಮುಗಿದ ಬಳಿಕ ಮತ್ತೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

Key words: Grilahakshmi Yojana- registration- process- temporarily – breakdown