Thursday, August 13, 2026

BDA Apartments

Home Front Page ಲೋಕಸಭೆ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ-  ಸಚಿವ ಎಂ.ಬಿ ಪಾಟೀಲ್....

ಲೋಕಸಭೆ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲುವುದು ನೂರಕ್ಕೆ ನೂರರಷ್ಟು ಸತ್ಯ-  ಸಚಿವ ಎಂ.ಬಿ ಪಾಟೀಲ್. ​

ಬೆಂಗಳೂರು,ಸೆಪ್ಟಂಬರ್,8,2023(www.justkannada.in):  ಲೋಕಸಭೆ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲುತ್ತೇವೆ. ಇದು ನೂರಕ್ಕೆ ನೂರರಷ್ಟು ಸತ್ಯ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ವಿಧಾನಸಭೆಯಲ್ಲಿ ಸ್ವಂತ ಬಲದಿಂದ ಹೇಗೆ 135 ಸ್ಥಾನ ಗೆದ್ದು ಅಧಿಕಾರಕ್ಕೆ ಬಂದಿದ್ದೇವೆ. ಅದೇ ರೀತಿ ಲೋಕಸಭೆಯಲ್ಲೂ ಕನಿಷ್ಠ 20 ಸ್ಥಾನ ಗೆದ್ದೆ ಗೆಲ್ಲುತ್ತೇವೆ. ಕನಿಷ್ಠ 20 ಸ್ಥಾನ ಗೆದ್ದೆ ಗೆಲ್ಲುತ್ತೇವೆ, ಇದು ನೂರಕ್ಕೆ ನೂರರಷ್ಟು ಸತ್ಯ ಎಂದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಸಚಿವ ಎಂ.ಬಿ ಪಾಟೀಲ್, ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡರೆ ಕಾಂಗ್ರೆಸ್​ಗೆ ಅನುಕೂಲವಾಗುತ್ತದೆ. ಬಿಜೆಪಿಯ ಬಿ ಟೀಂ ಜೆಡಿಎಸ್​ ಅಂತಾ ಅಧಿಕೃತವಾಗಿ ಗೊತ್ತಾಗುತ್ತಿದೆ. ನಾವು ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳಲ್ಲ ಎಂದು ತಿಳಿಸಿದರು.

Key words: Winning – 20 seats – Lok Sabha- elections-Minister -MB Patil.